Advertisement

“ನಾರಾಯಣ ಗುರು ನಿಗಮ ಸ್ಥಾಪನೆ ಮುಖ್ಯಮಂತ್ರಿಗೆ ಮನವಿ’

10:31 PM Sep 13, 2019 | Sriram |

ಕಟಪಾಡಿ: ಪ್ರಪಂಚವೇ ಒಂದು ಕುಟುಂಬದಂತೆ ಶಾಂತಿ, ನೆಮ್ಮದಿ, ಸಮಾನತೆಯಿಂದ ಬದುಕಬೇಕೆಂಬ ಸಂದೇಶ ನೀಡಿರುವ ಆದರ್ಶ ಪುರುಷ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ನಿಗಮ ಸ್ಥಾಪಿಸಿ ಧ್ವನಿ ಇಲ್ಲದವರಿಗೆ ಧ್ವನಿಯಾಗಬೇಕೆಂಬ ಮನವಿಯನ್ನು ರಾಜ್ಯ ಮುಖ್ಯಮಂತ್ರಿಗಳಿಗೆ ಮನವಿಯ ಮೂಲಕ ಒತ್ತಾಯಿಸಲಾಗುತ್ತದೆ ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Advertisement

ಅವರು ಸೆ.13ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಜಿಲ್ಲಾ ಬಿಲ್ಲವ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್‌, ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ , ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಪ್ರತಿಪಾದಿಸಿದ ನಾರಾಯಣ ಗುರುಗಳ ಸಂದೇಶ ಇವತ್ತಿನ ಜಗತ್ತಿಗೆ ಅತ್ಯಂತ ಪ್ರಸ್ತುತವಾಗಿದೆ. ಇಡೀ ಪ್ರಪಂಚ ಒಂದೇ ಕುಟುಂಬದಂತೆ ಶಾಂತಿ, ಸಮಾನತೆ, ಸಹಬಾಳ್ವೆಯಿಂದ ಬದುಕಬೇಕೆಂದು ಗುರುಗಳು ಬಯಸಿದ್ದರು. ಅವರು ಜಗತ್ತಿಗೇ ಸಾರಿದ ಸಮಾನತೆಯ ಸಂದೇಶ ನಮಗೆಲ್ಲರಿಗೂ ಆದರ್ಶ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬಲಾಡ್ಯರನ್ನು ಎದುರಿಸಿ ಅಸ್ಪೃಶ್ಯತೆ, ಜಾತೀಯತೆಯ ಆತಂಕ ನಿವಾರಿಸಿ ಶೋಷಿತರ ಧ್ವನಿಯಾಗುತ್ತಾ , ಭಾವನೆಗಳ ಭಾಷೆಯ ಮೂಲಕ ಸ್ವಾಭಿಮಾನ, ಕ್ರಾಂತಿಯ ಕಿಡಿಯನ್ನು ಹಚ್ಚಿ, ಜನರಿಗೆ ಶಕ್ತಿ ನೀಡಿದರು. ಸುಂದರ ಬದುಕು ಕಟ್ಟಿ ಕೊಡುವ ಆದರ್ಶನೀಯ ನಾರಾಯಣ ಗುರುಗಳ ತತ್ತÌದಂತೆ ಸಚಿವನಾಗಿ ಅಹರ್ನಿಶಿ ದುಡಿಯುವುದಾಗಿ ಹೇಳಿದರು.

ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರಾಡಳಿತ ಮಂಡಳಿಯ ವತಿಯಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.

Advertisement

ಹಿರಿಯಡ್ಕ ಸರಕಾರಿ ಪ.ಪೂ.ಕಾಲೇಜು ಉಪನ್ಯಾಸಕಿ ನಳಿನಾದೇವಿ ಎಂ.ಆರ್‌ ಉಪನ್ಯಾಸ ನೀಡಿದರು. ಸಪ್ನಾ ಮತ್ತು ನಾಗರಾಜ ಶೇಟ್‌ ಬಳಗ ಭಜನಾ ಕಾರ್ಯಕ್ರಮ ನಡೆಸಿದರು.

ತಾಲೂಕು ಪಂಚಾಯತ್‌ ಅಧ್ಯಕ್ಷೆ ನೀತಾಗುರುರಾಜ್‌ ಪೂಜಾರಿ, ಜಿಲ್ಲಾ ಪಂಚಾಯತ್‌ ಸದಸ್ಯರಾದ ಜನಾರ್ಧನ ತೋನ್ಸೆ, ಗೀತಾಂಜಲಿ ಎಂ. ಸುವರ್ಣ, ಶಿಲ್ಪಾ ಸುವರ್ಣ, ತಾಲೂಕು ಪಂಚಾಯತ್‌ ಸದಸ್ಯ ನಾಗೇಶ್‌ ಪೂಜಾರಿ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕಾಪು ತಹಶೀಲ್ದಾರ್‌ ಮೊಹಮ್ಮದ್‌ ಇಸಾಕ್‌, ಕಟಪಾಡಿ ವಿಶ್ವನಾಥ ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಬಿ.ಎನ್‌.ಶಂಕರ ಪೂಜಾರಿ, ಗೌ|ಪ್ರ|ಕಾರ್ಯದರ್ಶಿ ಯು. ಶಿವಾನಂದ್‌ ಉಪಸ್ಥಿತರಿದ್ದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕೇರಿ ಸ್ವಾಗತಿಸಿದರು. ಪೂರ್ಣಿಮಾ ವಂದಿಸಿದರು, ದಯಾನಂದ ಉಗ್ಗೆಲ್‌ಬೆಟ್ಟು ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next