Advertisement

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ

08:33 AM May 20, 2022 | Team Udayavani |

ಬೆಂಗಳೂರು: ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟ ಕುರಿತು ಊಹಾಪೋಹಗಳೆದ್ದಿದ್ದು, ಈ ಬಗ್ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈ ಬಿಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದಿದ್ದಾರೆ.

Advertisement

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಬಂದ ನಂತರ ಸ್ಪಷ್ಟನೆ ನೀಡಿದ ಸಚಿವ ಕೋಟ, ಮುಖ್ಯಮಂತ್ರಿಗಳನ್ನು ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಈ ಕುರಿತು ಭೇಟಿಯಾಗಿ ನಾನು ಮಾತನಾಡಿದ್ದು, ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ಮುಂದುವರಿದ ಮಳೆ: ಧಾರವಾಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದಾದ್ಯಂತ ಇರುವ ಈಡಿಗ, ಬಿಲ್ಲವ ಸಮುದಾಯ ಸೇರಿದಂತೆ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿಗಳು ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಸಚಿವ ಕೋಟ ಮನವಿ ಮಾಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next