Advertisement

ನಾರಾಯಣಗುರು ಸಾಮಾಜಿಕ ಸ್ವಾತಂತ್ರ್ಯದ ಹೋರಾಟಗಾರರು

09:22 AM Sep 07, 2017 | |

ಉಡುಪಿ: ರಾಜಕೀಯವಾಗಿ ಪ್ರಜಾಪ್ರಭುತ್ವ ದೇಶಕ್ಕಾಗಿ ಸ್ವಾತಂತ್ರ್ಯ ಪೂರ್ವದಲ್ಲಿ ಸ್ವಾತಂತ್ರ್ಯದ ಹೋರಾಟ ನಡೆಸಿದ ಅನೇಕರು ಒಂದೆ‌ಡೆಯಾ ದರೆ, ಇನ್ನೊಂದೆಡೆ ಸಮಾಜದಲ್ಲಿದ್ದ ಅಸ್ಪೃಶ್ಯತೆ, ಅಸಮಾನತೆಯನ್ನು ತೊಡೆದು ಹಾಕಲು ಸಾಮಾಜಿಕ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಪ್ರಮುಖರು ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

Advertisement

ಬುಧವಾರ ಜಿಲ್ಲಾಡಳಿತ, ಜಿ.ಪಂ. ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾ ಖೆಯ ಸಹಯೋಗದಲ್ಲಿ ಬನ್ನಂಜೆಯ ನಾರಾಯಣಗುರು ಸಭಾಭವನದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 163ನೇ ಗುರುಜಯಂತಿ ಕಾರ್ಯಕ್ರಮ ವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ರಾಜ್ಯ ಸರಕಾರ ನಾರಾಯಣ ಗುರು ಗಳು ತಣ್ತೀಗಳ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಶೋಷಿತರು ಮತ್ತು ಹಿಂದುಳಿದ ವರ್ಗದವರ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಹಿಂದುಳಿದ ವರ್ಗ ಗಳ ಇಲಾಖೆಯ ಮೂಲಕ ಎಲ್ಲ ಸಮಾಜಗಳ ಸಮುದಾಯ ಭವನಗಳ ನಿರ್ಮಾಣಕ್ಕೆ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಕಡೆಕಾರು, ಮಲ್ಪೆ, ಹಾವಂಜೆ, ಹೂಡೆ, ಅಂಬಲಪಾಡಿ ಸಹಿತ ಹಲವು ಕಡೆಗಳಲ್ಲಿ ನಾರಾಯಣ ಗುರು, ಮೊಗವೀರ, ಕುಡುಬಿ, ಕುಲಾಲ, ವಿಶ್ವಕರ್ಮ ಮೊದಲಾದ ಸಮುದಾಯ ಭವನಗಳ ನಿರ್ಮಾಣಕ್ಕೆ ತಲಾ 25ರಿಂದ 50 ಲ.ರೂ. ವರೆಗೆ ಅನುದಾನ ನೀಡ ಲಾಗಿದೆ ಎಂದರು.

ಉಪೇಂದ್ರ ಪೈ ಮೆಮೋರಿಯಲ್‌ ಕಾಲೇಜಿನ ಪ್ರಾಂಶುಪಾಲ ಡಾ| ಮಧುಸೂದನ ಭಟ್‌ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಉಡುಪಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ಜಿ.ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸಂಜೀವ ಎಂ. ಪಾಟೀಲ್‌, ತಹಶೀಲ್ದಾರ್‌ ಪ್ರದೀಪ್‌ ಕುರ್ಡೆಕರ್‌, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಬಿ. ಅಮೀನ್‌, ಬನ್ನಂಜೆ ಬಿಲ್ಲವ ಸಂಘದ ಅಧ್ಯಕ್ಷ ಬಿ.ಬಿ. ಪೂಜಾರಿ, ಆಚರಣಾ ಸಮಿತಿ ಉಪಾಧ್ಯಕ್ಷ ದೇವದಾಸ್‌ ಆರ್‌. ಸುವರ್ಣ ಉಪ ಸ್ಥಿತರಿದ್ದರು.

ಜಿ.ಪಂ. ಸದಸ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಆಚರಣಾ ಸಮಿತಿ ಅಧ್ಯಕ್ಷ ಜನಾರ್ದನ ತೋನ್ಸೆ ಪ್ರಸ್ತಾವನೆ ಗೈದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಮಹದೇವಯ್ಯ ಸ್ವಾಗತಿಸಿದರು. ಸತೀಶ್‌ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು. ನಾರಾಯಣಗುರು ಜಯಂತಿ ಅಂಗವಾಗಿ ಏರ್ಪಡಿಸಿದ್ದ ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Advertisement

ಗುರುಗಳ  ತತ್ತ್ವ ಅನುಷ್ಠಾನವಾದರೆ ಅಶಾಂತಿ ದೂರ
ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು ಸಂದೇಶವನ್ನು ಒಳಗೊಂಡಂತೆ ಅವರ ತತ್ತಾದರ್ಶಗಳನ್ನು ದೇಶದ ಎಲ್ಲ ರಾಜಕೀಯ ಪಕ್ಷಗಳು ಅನುಷ್ಠಾನಕ್ಕೆ ತಂದರೆ ದೇಶದಲ್ಲಿ ಅಶಾಂತಿ ದೂರವಾಗುತ್ತದೆ. ದಲಿತರ, ದೌರ್ಜನ್ಯಕ್ಕೆ ಒಳಗಾದವರ ಹಾಗೂ ಹಿಂದುಳಿದವರು ಸೇರಿದಂತೆ ಸಮಾಜದ ಎಲ್ಲ ವರ್ಗಗಳ ಜನರ ಅಭಿವೃದ್ಧಿಗೆ ಶ್ರಮಿಸಿದ ನಾರಾಯಣ ಗುರುಗಳು ದೇಶದ ಸಾಮಾಜಿಕ ಸ್ವಾತಂತ್ರ್ಯಕ್ಕೆ ಮುನ್ನುಡಿ ಬರೆದವರು. ಅವರ ಆದರ್ಶಗಳನ್ನು ನಾನು ಪಾಲಿಸುತ್ತೇನೆ. ಎಲ್ಲರೂ ಪಾಲನೆ ಮಾಡಬೇಕು ಎಂದು ಸಚಿವ ಪ್ರಮೋದ್‌ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next