ತುಮಕೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2021-22ನೇ ಸಾಲಿನ ಕಾರ್ಮಿಕರ ಆಯವ್ಯಯತಯಾರಿಸುವ ಸಲುವಾಗಿ ಬುಕ್ಕಪಟ್ಟಣ ಗ್ರಾಪಂನಿಂದಹಮ್ಮಿಕೊಂಡಿದ್ದ ರೈತರ ಕ್ರಿಯಾಯೋಜನೆ ಅಭಿಯಾನದ ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಕೊರಟಗೆರೆ ತಾಪಂ ಸಹಾಯಕ ನಿರ್ದೇಶಕಕೆ.ಬಿ.ನಾಗರಾಜು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಗ್ರಾಮೀಣ ಭಾಗದ ರೈತರು, ಗ್ರಾಮಸ §ರು ತಮ್ಮ ತಮ್ಮ ಸ್ವಂತ ಜಮೀನುಗಳಲ್ಲಿ ತಾವೇ ಕಾಮಗಾರಿ ಗಳನ್ನುಕೈಗೊಂಡು ಕೂಲಿ ಹಣ ಪಡೆಯುವ ಮೂಲಕ ನೆಮ್ಮದಿಯ ಬದುಕು ಸಾಗಿಸಲು ಮಹಾತ್ಮಗಾಂಧಿ ನರೇಗಾ ಯೋಜನೆಯು ಸಹಕಾರಿಯಾಗಿದೆ. ಈ ಯೋಜನೆಯಡಿ ದೊರೆಯುವಂತಹ ಸೌಲಭ್ಯಗಳನ್ನು ಗ್ರಾಮೀಣ ಭಾಗದ ಜನರು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ರೈತರಿಗೆ ಉತ್ತಮ ಅವಕಾಶ: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ರೈತರು ವೈಯಕ್ತಿಕ ಕಾಮಗಾರಿಗಳಾದ ಬಚ್ಚಲುಗುಂಡಿ ನಿರ್ಮಾಣ, ಪೌಷ್ಟಿಕ ಕೈತೋಟ ನಿರ್ಮಾಣ, ಅಣಬೆ ಬೇಸಾಯಕೃಷಿ ಷೆಡ್, ಕ್ಷೇತ್ರ ಬದು ನಿರ್ಮಾಣ, ಕೃಷಿಹೊಂಡ,ದನದ ಕೊಟ್ಟಿಗೆ, ಕುರಿ, ಮೇಕೆ ಷೆಡ್ ನಿರ್ಮಾಣಮಾಡಿಕೊಳ್ಳಬಹುದು. ಅಲ್ಲದೆ ತೋಟಗಾರಿಕೆ ಬೆಳೆಗಳಾದ ತೆಂಗು, ಮಾವು, ದಾಳಿಂಬೆ, ಸೀಬೆ, ನುಗ್ಗೆ, ಕರಿಬೇವು, ಗುಲಾಬಿ ಮೊದಲಾದಕಾಮಗಾರಿಗಳನ್ನು ರೈತರು ಕೈಗೊಳ್ಳಲು ಅವಕಾಶವಿದೆ ಎಂದು ಸಲಹೆ ನೀಡಿದರು.
ಎಲ್ಲರಿಗೂ ಸಮಾನ ವೇತನ: ನರೇಗಾ ಯೋಜನೆಯಡಿ ಎಲ್ಲರಿಗೂ ಸಮಾನ ವೇತನ ನೀಡಲಾಗುವುದು. ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವ ರೈತರು ಅ. 2 ರಿಂದ ಪ್ರತಿ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಇಟ್ಟಿರುವಂತಹ ಕಾಮಗಾರಿ ಬೇಡಿಕೆ ಪೆಟ್ಟಿಗೆಗಳಲ್ಲಿ ತಾವು ಮಾಡಲು ಇಚ್ಚಿಸಿರುವ ಕಾಮಗಾರಿಗಳ ವಿವರ, ಜಾಬ್‌ಕಾರ್ಡ್ ಸಂಖ್ಯೆ ಸೇರಿದಂತೆ ಇತರೆವಿಷಯಗಳನ್ನು ಭರ್ತಿ ಮಾಡಿ ಪೆಟ್ಟಿಗೆಯಲ್ಲಿ ಹಾಕಬಹುದು. ಆ ಅರ್ಜಿಗಳನ್ನು ಸ್ವೀಕರಿಸಿ 2021-22ನೇ ಸಾಲಿನ ಕ್ರಿಯಾಯೋಜನೆಗೆ ನಿಯಮಾನುಸಾರ ಬಂದಂತಹ ಸೇರ್ಪಡೆಗೊಳಿಸಲಾಗುವುದು ಎಂದು ತಿಳಿಸಿದರು.
ಕಾಯಕಮಿತ್ರ ಮೊಬೈಲ್ ಆ್ಯಪ್: ಕೊರಟಗೆರೆ ತಾಲೂಕು ಐಇಸಿ ಸಂಯೋಜಕ ಟಿ.ಕೆ.ವಿನುತ್ ಮಾತನಾಡಿ, ರೈತರು ತಮ್ಮ ಜಮೀನುಗಳಲ್ಲಿಕೈಗೊಳ್ಳಬಹುದಾದ ಕಾಮಗಾರಿಗಳ ಬೇಡಿಕೆಯನ್ನು ಕಾಯಕಮಿತ್ರ ಮೊಬೈಲ್ ಆ್ಯಪ್ ಮೂಲಕವೂ ಸಲ್ಲಿಸಬಹುದು. ಅಲ್ಲದೆ ನರೇಗಾ ವೆಬ್‌ಸೈಟ್
https://www.mgnregakarnataka.com/ yojane ಮೂಲಕವೂ ಅರ್ಜಿ ಸಲ್ಲಿಸಬಹುದು. ಈ
ಸೌಲಭ್ಯವನ್ನು ಗ್ರಾಮೀಣ ಭಾಗದ ಜನರು ಸದುಪಯೋಗ ಪಡಿಸಿಕೊಂಡು ಮನೆಯಿಂದಲೇ ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ತಾಂತ್ರಿಕ ಸಂಯೋಜಕ ಎಂ.ಡಿ.ರಂಗನಾಥ್, ಬುಕ್ಕಪಟ್ಟಣಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುನೀಲ್ ಕುಮಾರ್ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.