Advertisement
ತಾಲೂಕಿನ ಇಂಡುವಾಳು ಗ್ರಾಮ ಪಂಚಾಯಿತಿಯ ಮೊಳೆ ಕೊಪ್ಪಲು ಗ್ರಾಮದಲ್ಲಿ ಜಿಪಂ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಜಾಬ್‌ಕಾರ್ಡ್ ಮೇಳ’ದಲ್ಲಿ ಅರ್ಹ ಫಲಾನುಭವಿಗಳಿಗೆ ಜಾಬ್ ಕಾರ್ಡ್ ವಿತರಿಸಿ ಮಾತನಾಡಿದ ಅವರು, ಜನರು ತಾವು ಇರುವ ಊರುಗಳಲ್ಲೇ ಕೆಲಸ ಪಡೆದು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಂಡು ಆರ್ಥಿಕವಾಗಿ ಸಬಲರಾಗಬಹುದು ಎಂದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯೋಜನೆಯಲ್ಲಿ ಸಿಗುವ ಪ್ರಯೋಜನಗಳನ್ನು ಪಡೆಯಲು ಮುಂದಾಗಬೇಕು.ಕೋವಿಡ್ ಮೂರನೇ ಅಲೆ ಬಂದರೆ ಅದನ್ನು ಎದುರಿಸಲು ಹೆಚ್ಚಿನ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
Related Articles
Advertisement
ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕಾಮಗಾರಿ ಆದೇಶ ಅಭಿಯಾನ, ಕಾಮಗಾರಿಗೆ ಚಾಲನೆ, ಕಾಮಗಾರಿ ಮುಕ್ತಾಯ ಗೊಳಿಸುವ, ಆಸ್ತಿ ಬಳಕೆ ಅಭಿಯಾನ ಹಮ್ಮಿಕೊಳ್ಳಲಾಗುವುದು. ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳು ಕೈಜೋಡಿಸಿದರೆ ನರೇಗಾ ಯೋಜನೆ ಯಶಸ್ಸು ಕಾಣಲಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಜಾಬ್ ಕಾರ್ಡ್ ವಿತರಿಸಲಾಯಿತು. ಗ್ರಾಪಂ ಅಧ್ಯಕ್ಷೆ ತನುಜಾ,ಉಪಾಧ್ಯಕ್ಷೆ ಮಮತಾ, ತಾಪಂ ಇಒ ವೇಣು, ಸಹಾಯಕನಿರ್ದೇಶಕ ಶ್ರೀನಿವಾಸ್, ಪಿಡಿಒ ದಯಾನಂದ್, ಜನವಾದಿ ಸಂಘಟನೆಯ ದೇವಿ, ಜಿಲ್ಲಾ ಐಇಸಿ ಸಂಯೋಜಕಿ ರೇಖಾ ಕೀಲಾರ, ತಾಲೂಕು ಸಂಯೋಜಕಿ ಆಶಾ ಮತ್ತಿತರರಿದ್ದರು.