Advertisement
ಮಡಬಲು ಗ್ರಾಮ ಪಂಚಾಯಿತಿ ಮಡಬಲು ಗ್ರಾಮದಲ್ಲಿ ನರೇಗಾ ಯೋಜನ್ ದಿವಸ್ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ಮೂಲಕ ಚಾಲನೆ ನೀಡಿ ಮಾತನಾಡಿದರು, ಇಂದು ಇಡಿ ದೇಶದಲ್ಲಿ ನರೇಗಾ ಯೋಜನ್ ದಿವಸವನ್ನು ಆಚರಿಸಲಾಗುತ್ತಿದೆ. ಕೃಷಿ, ತೋಟಗಾರಿಕೆ, ಸೆಸ್ಕ್, ಶಿಕ್ಷಣ, ಆರೋಗ್ಯ,ಪಶು ಇಲಾಖೆ, ಎಂಜಿನಿಯರಿಂಗ್ ಸೇರಿದಂತೆ ಬಹುತೇಕ ಎಲ್ಲ ಇಲಾಖೆಗಳಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ತಾಲ್ಲೂಕಿನ ಎಲ್ಲ ಇಲಾಖೆ ಆಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದು ಒಂದು ದಿನದ ಮಟ್ಟಿಗೆ ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯೋನ್ಮುಖರಾಗಿ, ಕಲ್ಯಾಣಿಗಳನ್ನು ಶುಚಿಗೊಳಿಸುವುದು, ಶಾಲೆ, ಅಂಗನವಾಡಿ, ದೇವಸ್ಥಾನಗಳು, ಸಮುದಾಯಭವನಗಳ ಅಂಗಳ ಶುಚಿಗೊಳಿಸುವುದು ಸೇರಿದಂತೆ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯೋನ್ಮುಖರಾಗಿದ್ದಾರೆ. ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳ ಮೂಲಕ 180 ಕೋಟಿ ರೂ. ಗಳನ್ನು ಖರ್ಚು ಮಾಡಲಾಗಿದೆ. 52 ಲಕ್ಷ ಮಾನವ ದಿನಗಳನ್ನು ಸೃಷ್ಟಿ ಮಾಡಲಾಗಿದೆ. ಇದು ಮುಂದುವರಿದ ಕಾರ್ಯಕ್ರಮವಾಗಿರುವುದರಿಂದ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಪ ಕಾರ್ಯದರ್ಶಿ(ಆಡಳಿತ) ಚಂದ್ರಶೇಖರ್, ಉಪ ಕಾರ್ಯದರ್ಶಿ (ಅಭಿವೃದ್ಧಿ) ಪುನೀತ್, ಮುಖ್ಯ ಯೋಜನಾಧಿಕಾರಿ ನಾಗರಾಜ್, ಯೋಜನ ನಿರ್ದೇಶಕ ವಿಠಲ್ ಕಾವ್ಳೆ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ನಾರಾಯಣಸ್ವಾಮಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ, ಸಿಡಿಪಿಒ ಎ. ಟಿ. ಮಲ್ಲೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಶೋಭಾ, ಮಡಬಲು ಗ್ರಾಮ ಪಂಚಾಯಿತಿ ಪಿಡಿಒ ಮಹಮ್ಮದ್ ಇತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆಲೂರು ತಾಲ್ಲೂಕು ನೂತನ ಕಸಾಪ ಅಧ್ಯಕ್ಷ ಗೋಪಾಲಕೃಷ್ಣ ಅವರ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾಂತರಾಜ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.