Advertisement

ಮಧ್ಯಮವರ್ಗಕ್ಕೆ ಯೋಜನೆ ತಲುಪಲಿ: ಸಂಪುಟ ಸಹೋದ್ಯೋಗಿಗಳೊಂದಿಗಿನ ಸಭೆಯಲ್ಲಿ ಸೂಚನೆ

12:49 AM Jan 30, 2023 | Team Udayavani |

ಹೊಸದಿಲ್ಲಿ: ಕೇಂದ್ರ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ, ರವಿವಾರ ಸಭೆ ನಡೆಸಿದ್ದಾರೆ. ಈ ವೇಳೆ ಮಧ್ಯಮ ವರ್ಗದವರನ್ನು ಸಂಪರ್ಕಿಸಿ, ಅವರಿಗೆ ಲಾಭದಾಯಕವಾಗಿರುವ ಹಾಗೂ ಅಗತ್ಯವಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಎಂದು ಸೂಚನೆ ನೀಡಿದ್ದಾರೆ.

Advertisement

ಕೇಂದ್ರ ಬಜೆಟ್‌ ಮಂಡನೆಗೆ ದಿನಗಣನೆ ಆರಂಭವಾಗಿರುವಾಗಲೇ ಮೋದಿ, ಕೇಂದ್ರ ಸಚಿವರ ಸಭೆಯ ಅಧ್ಯಕ್ಷತೆ ವಹಿಸಿದ್ದು, ಸರಕಾರ ಬಡವರು ಹಾಗೂ ಮಧ್ಯಮ ವರ್ಗದವರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ ಎಷ್ಟೋ ಜನರಿಗೆ ಈ ವಿಚಾರ ಗಳು ತಲುಪಿಲ್ಲ. ಈ ವಿಚಾರವನ್ನು ಜನರಿಗೆ ತಿಳಿಸಿ, ಸತ್ಯಾಂಶ ಏನು ಎಂಬುದನ್ನು ಅರ್ಥೈಸುವ ಪ್ರಯತ್ನ ಮಾಡಿ ಎಂದು ತಿಳಿಸಿದ್ದಾರೆ.

2023ರಲ್ಲಿ ನಡೆಯುತ್ತಿರುವ ಕೇಂದ್ರ ಸಚಿವರ ಮೊದಲ ಸಭೆ ಇದಾಗಿದ್ದು, ಸಭೆಯಲ್ಲಿ ಸಚಿವರು ನಿರ್ವ ಹಿಸಬೇಕಿರುವ ಕಾರ್ಯಗಳ ಬಗ್ಗೆ ಪ್ರಸ್ತುತಿಗಳನ್ನು ನೀಡಲಾಗಿದೆ. ಅದರಲ್ಲಿ ಮೋದಿ ಸರಕಾರ ಕಳೆದ 8 ವರ್ಷಗಳಲ್ಲಿ ಯಾವೆಲ್ಲ ಕ್ಷೇತ್ರಗಳಲ್ಲಿ ಯಾವೆಲ್ಲ ಸುಧಾರಣೆಗಳು, ಯೋಜನೆಗಳನ್ನು ತಂದಿದೆ ಎಂಬುದರ ಬಗ್ಗೆ ತಿಳಿಸಲಾಗಿದೆ ಎಂದು ಮೂಲಗಳು ಹೇಳಿವೆ.

Advertisement

Udayavani is now on Telegram. Click here to join our channel and stay updated with the latest news.

Next