Advertisement
ಇಂದು ‘ಮನ್ ಕಿ ಬಾತ್’ ಆವೃತ್ತಿಯಲ್ಲಿ ಮಾತನಾಡಿದ ಅವರು ಜನರನ್ನು ಲಸಿಕೆ ಪಡೆಯಲು ಪ್ರೇರೇಪಿಸಿದರು.
Related Articles
Advertisement
ಈ ಬಾರಿ ಆಗಸ್ಟ್ 15ರಂದು ಸ್ವಾತಂತ್ರ್ಯ ಮಹೋತ್ಸವದ ಅಮೃತ ಮಹೋತ್ಸವವನ್ನು ದೇಶ ಆಚರಣೆ ಮಾಡುತ್ತಿದೆ. ನಾವು 12 ಮಾರ್ಚ್‌ರಂದು ಅಮೃತ ಮಹೋತ್ಸವ ಯಾತ್ರೆಗೆ ಚಾಲನೆ ನೀಡಿದ್ದೇವೆ. ದೇಶದ ವಿವಿಧ ಭಾಗದಲ್ಲಿ ಹಲವಾರು ಕಾರ್ಯಕ್ರಮಗಳು ನಡೆಯುತ್ತಿವೆ. ಆಗಸ್ಟ್ 15ರಂದು ಎಷ್ಟು ಜನರು ಸಾಧ್ಯವೋ ಅಷ್ಟು ಜನರು ಸೇರಿಕೊಂಡು ರಾಷ್ಟ್ರಗೀತೆಯನ್ನು ಹಾಡಿ. ರಾಷ್ಟ್ರಗಾನ ಡಾಟ್ ಕಾಮ್ ಮೂಲಕದನ್ನು ರೆಕಾರ್ಡ್ ಮಾಡಲು ಅವಕಾಶವನ್ನು ನೀಡಲಾಗಿದೆ. ಈ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳಿ ಎಂದರು.
ಅಮೃತ ಮಹೋತ್ಸವ ಕಾರ್ಯಕ್ರಮವು ಸರ್ಕಾರಿ ಕಾರ್ಯಕ್ರಮವಲ್ಲ. ಇದು ದೇಶದ ಎಲ್ಲಾ ಜನರ ಕಾರ್ಯಕ್ರಮವಾಗಿದೆ. ನಿಮಗೆ ಎಲ್ಲೆಲ್ಲಿ ಸಾಧ್ಯವೋ ಅಲ್ಲಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ವಾತ್ರಂತ್ರ್ಯ ಸೇನಾನಿಗಳನ್ನು ನೆನಪಿಸಿಕೊಳ್ಳಿ ಎಂದು ಪ್ರಧಾನಿ ಮೋದಿ ಮನವಿ ಮಾಡಿದರು.
ಬಾಳೆ ಮರದ ನಾರಿನಿಂದ ಇಂದು ಹ್ಯಾಂಡ್ ಬ್ಯಾಗ್ ತಯಾರು ಮಾಡಲಾಗುತ್ತಿದೆ. ಇದರಿಂದ ಮಹಿಳೆಯರಿಗೆ ಅವರ ಗ್ರಾಮದಲ್ಲಿಯೇ ಉದ್ಯೋಗ ಸಿಕ್ಕಿದೆ. ಕರ್ನಾಟಕದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಬಾಳೆಯ ವಿವಿಧ ಉತ್ಪನ್ನಗಳನ್ನು ಬಾಳೆ ಹಿಟ್ಟಿನಿಂದ ತಯಾರು ಮಾಡುತ್ತಿದ್ದಾರೆ. ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುತ್ತಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲದೆ ಇಂದು ಮಣಿಪುರ ರಾಜ್ಯದಲ್ಲಿಯೂ ಸೇಬು ಬೆಳೆಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ತರಬೇತಿ ಮುಗಿಸಿಕೊಂಡು ಬಂದು ಇಂದು ಸೇಬು ಬೆಳೆಯುತ್ತಿದ್ದಾರೆ. ಈಗ ಹಲವು ರೈತರು ಇವರಿಂದ ಪ್ರೇರಣೆ ಪಡೆದಿದ್ದಾರೆ.