Advertisement
ಪ್ರಧಾನಮಂತ್ರಿ ನರೇಂದ್ರ ಮೋದಿ ಮೇ 3ರಂದು ಮೂಲ್ಕಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದು, ಅದಕ್ಕಾಗಿ ಸಿದ್ಧತೆ ನಡೆದಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ ಶೇಣವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ಎ. 27 ರಂದು ಮಂಗಳೂರಿಗೆ ನಿಗದಿಯಾಗಿದ್ದ ಅಮಿತ್ ಶಾ ಭೇಟಿ ರದ್ದಾಗಿದೆ. ಕಾಪುವಿನ ಭೇಟಿ ದಿನಾಂಕ ನಿಗದಿಯಾಗಿಲ್ಲ.
ಮೋದಿ ಅವರು ಪ್ರಧಾನಿಯಾಗಿ ಎಲ್ಲಿಗೆ ಬೇಕಾದರೂ ಹೋಗಬಹುದು. ಅದಕ್ಕೆ ಕಾಂಗ್ರೆಸ್ ನಾಯಕರ ಅನುಮತಿ ಅಗತ್ಯವಿಲ್ಲ. ಮೋದಿ ಅವರ ಪ್ರವಾಸವನ್ನು ಟೀಕಿಸುವ ಕಾಂಗ್ರೆಸ್, ಪಕ್ಷದಲ್ಲಿ ಏನೂ ಅಲ್ಲದ ರಾಹುಲ್ ಗಾಂಧಿಯನ್ನು ರಾಜ್ಯದಲ್ಲಿ ಪ್ರವಾಸ ಮಾಡಿಸುವ ಪ್ರಸ್ತುತತೆ ಏನು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಪ್ರಶ್ನಿಸಿದರು. ಜಿಲ್ಲೆಯಲ್ಲಿ ಬಿಜೆಪಿ ಶಾಸಕರು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದು, ಎಲ್ಲ ಕ್ಷೇತ್ರಗಳಲ್ಲೂ ಜಯಗಳಿಸುವರು. ರಾಜ್ಯದಲ್ಲೂ ಪಕ್ಷ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ ಎಂದರು. ಸೋಲಿನ ಭೀತಿಯಲ್ಲಿರುವ ಕಾಂಗ್ರೆಸ್ ಎಸ್‌ಡಿಪಿಐ ಜತೆ ಮೈತ್ರಿಗೆ ಮುಂದಾಗಿದೆ ಎಂದು ಆರೋಪಿಸಿದರು. ಮುಡಾ ಅಧ್ಯಕ್ಷ ರವಿಶಂಕರ ಮಿಜಾರು, ಮೀನುಗಾರಿಕೆ ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್, ಮಾಜಿ ಕಾರ್ಪೊರೇಟರ್ ವಿಜಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
Related Articles
ಮಡಿಕೇರಿ, ಎ. 25: ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವೀರಾಜಪೇಟೆ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಎ. 29ರಂದು ಮಡಿಕೇರಿಗೆ ಆಗಮಿಸಲಿದ್ದು, ಬೆಳಗ್ಗೆ 10.30 ಕ್ಕೆ ಗಾಂಧಿ ಮೈದಾನದಲ್ಲಿ ಪ್ರಚಾ ಸಭೆಯಲ್ಲಿ ಪಾಲ್ಗೊಳ್ಳುವರು.
Advertisement
ಕೇಂದ್ರ ಹಾಗೂ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳು ಮತ್ತು ಕಾಂಗ್ರೆಸ್ ಪಕ್ಷದ ಬೇಜವಾಬ್ದಾರಿ ನಡೆ ಬಿಜೆಪಿಯ ಗೆಲುವಿಗೆ ಪೂರಕ ವಾತಾವರಣವನ್ನು ಸೃಷ್ಟಿಸಿದೆ ಎಂದು ಪಕ್ಷದ ಕೊಡಗು ಉಸ್ತುವಾರಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ವೀರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಶಾಸಕ ಕೆ.ಜಿ. ಬೋಪಯ್ಯ, ಚುನಾವಣೆ ಘೋಷಣೆಗೂ ಮೊದಲೇ ಬಿಜೆಪಿ ಜನರ ಬಳಿ ತೆರಳಿದ್ದು, ಬೂತ್ ಗಳನ್ನು ಬಲಗೊಳಿಸಿದೆ. ಇದರ ಪರಿಣಾಮ ಹೆಚ್ಚಿನ ಅಂತರದಿಂದ ಗೆಲ್ಲಲಿದ್ದೇವೆ ಎಂದರು.