Advertisement

ಇಂದು ಬೈಡನ್‌-ಮೋದಿ ವರ್ಚುವಲ್‌ ಭೇಟಿ : ಭಾರೀ ಮಹತ್ವ ಪಡೆಯಲಿದೆ ಉಭಯ ನಾಯಕರ ಭೇಟಿ

11:41 PM Apr 10, 2022 | Team Udayavani |

ಹೊಸದಿಲ್ಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಜೊ ಬೈಡನ್‌, ಸೋಮವಾರ ವರ್ಚುವಲ್‌ ಮಾದರಿಯಲ್ಲಿ ಪರಸ್ಪರ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆಂದು ಕೇಂದ್ರ ಸರಕಾರ ಪ್ರಕಟಿಸಿದೆ.

Advertisement

ರಷ್ಯಾದಿಂದ ಕಚ್ಚಾ ತೈಲವನ್ನು ಕೊಳ್ಳಲು ಮುಂದಾಗಿರುವ ಭಾರತದ ಮೇಲೆ ತೈಲವನ್ನು ಕೊಳ್ಳಕೂಡದೆಂದು ಅಮೆರಿಕ, ಪಾಶ್ಚಾತ್ಯ ರಾಷ್ಟ್ರಗಳು ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಉಭಯ ನಾಯಕರ ಮಾತುಕತೆ ಭಾರೀ ಮಹತ್ವ ಪಡೆದುಕೊಂಡಿದೆ.

“ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ, ಅಮೆರಿಕ ನಡುವಿನ ರಾಜತಾಂತ್ರಿಕ ಸಂಬಂಧಗಳು, ವ್ಯಾಪಾರ- ವಹಿವಾಟಿನಲ್ಲಿ ಉಭಯ ದೇಶಗಳು ನೀಡುತ್ತಿರುವ ಪರಸ್ಪರ ಸಹಾಯ, ಇಂಡೋ-ಪೆಸಿಫಿಕ್‌ ಪ್ರಾಂತ್ಯದಲ್ಲಿನ ದೇಶಗಳ ಹಾಗೂ ಜಾಗತಿಕ ಸಮಸ್ಯೆಗಳ ಬಗ್ಗೆ ಇಬ್ಬರೂ ಚರ್ಚಿಸುವ ಸಾಧ್ಯತೆಗಳಿವೆ.

ಇದರ ಜತೆಗೆ ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಇತ್ತೀಚೆಗೆ ಉಂಟಾಗಿರುವ ವಿದ್ಯಮಾನಗಳೂ ಉಭಯ ನಾಯಕರ ನಡುವೆ ಚರ್ಚೆ ಗೊಳಪಡಲಿವೆ’ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next