Advertisement

ಡಿಜಿಪಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಸಭೆ 

10:00 AM Jan 08, 2018 | Team Udayavani |

ಇಂದೋರ್‌: ದೇಶದ ಭದ್ರತಾ ಸನ್ನಿವೇಶದ ಬಗ್ಗೆ ಡಿಜಿಪಿ ಹಾಗೂ ಐಜಿಪಿಗಳ ಜತೆ ಮಧ್ಯಪ್ರದೇಶದ ತೇಕನ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ರವಿವಾರ ಸಭೆ ನಡೆಸಿದ್ದಾರೆ. ಭದ್ರತಾ ಕ್ರಮಗಳನ್ನು ಹೇಗೆ ಬಿಗಿಗೊಳಿಸಬೇಕು ಎಂಬುದೂ ಸೇರಿದಂತೆ ಹಲವು ವಿಷಯಗಳ ಬಗ್ಗೆ ದಿನವಿಡೀ ನಡೆದ ಸಭೆಯಲ್ಲಿ ಚರ್ಚಿಸಲಾಯಿತು. ಪೊಲೀಸ್‌ ಅಧಿಕಾರಿಗಳು ಭದ್ರತೆಗೆ ಸಂಬಂಧಿಸಿದ ಹಲವು ಅಂಶಗಳ ಬಗ್ಗೆ ಪ್ರಧಾನಿ ಮೋದಿಗೆ ವಿವರಿಸಿದ್ದಾರೆ. ಜಮ್ಮು ಕಾಶ್ಮೀರ, ಈಶಾನ್ಯ ರಾಜ್ಯಗಳು ಮತ್ತು ನಕ್ಸಲ್‌ ಪೀಡಿತ ಪ್ರದೇಶದಲ್ಲಿ ಭದ್ರತೆಯ ಮೇಲೆ ಹೆಚ್ಚಿನ ಒತ್ತು ನೀಡುವಂತೆ ಮೋದಿ ಕರೆ ನೀಡಿದ್ದಾರೆ ಎಂದು ಹೇಳಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next