ಶಿವಮೊಗ್ಗ: ಇತ್ತೀಚೆಗಷ್ಟೇ ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ಕೆಎಸ್ ಈಶ್ವರಪ್ಪ ಅವರಿಗೆ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಮಾತನಾಡಿ ನಿಮ್ಮ ಜೊತೆಗೆ ನಾನಿದ್ದೇನೆ ಎಂಬ ಭರವಸೆ ನೀಡಿದ್ದಾರೆ.
ನೀವು ಬಿ.ಎಸ್ ಯಡಿಯೂರಪ್ಪ ಪಕ್ಷಕ್ಕಾಗಿ ಕೆಲಸ ಮಾಡಿದ್ದೀರಿ. ಪಕ್ಷ ಸಂಘಟನೆ ನಿಮ್ಮ ಜೊತೆ ಯಾವಾಗಲೂ ಇರುತ್ತದೆ ಎಂದು ಮೋದಿ ತಿಳಿಸಿದ್ದಾರೆ, ಇದಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ನೀವು ಪೋನ್ ಮಾಡಿದ್ದು ಖುಷಿಯಾಗಿದೆ. ಶಿವಮೊಗ್ಗದಲ್ಲಿ ನಾವು ಗೆಲ್ಲುತ್ತೇವೆ. ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ನೀವು ಕರೆ ಮಾಡಿದ್ದು ಬಹಳ ಖುಷಿ ಆಗಿದೆ ಎಂದರು
ಪಕ್ಷದ ಸೂಚನೆಯಂತೆ ಶಿಸ್ತು ಪಾಲನೆ ಮಾಡಿದ್ದಕ್ಕೆ ಮೋದಿ ಸಂತಸ ವ್ಯಕ್ತಪಡಿಸಿದ್ದು, ರಾಜ್ಯಕ್ಕೆ ಬಂದ ಸಮಯದಲ್ಲಿ ಭೇಟಿಯಾಗುವುದಾಗಿ ತಿಳಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಬಿಜೆಪಿ ಸರಕಾರ ಮತ್ತೆ ಅಧಿಕಾರಕ್ಕೆ ಬರಲು ಮೋದಿ ಸೂಚನೆ ನೀಡಿದ್ದಾರೆ ಎಂದು ಈಶ್ವರಪ್ಪ ಹೇಳಿದರು.
ಇದನ್ನೂ ಓದಿ:2nd PUC: 317 ಕಾಲೇಜುಗಳಲ್ಲಿ ಶೇ.100 ಫಲಿತಾಂಶ; 78 ಕಾಲೇಜುಗಳಲ್ಲಿ ಒಬ್ಬರೂ ಉತ್ತೀರ್ಣರಿಲ್ಲ
ಕೆಲ ದಿನಗಳ ಹಿಂದೆ ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು. ಶಿವಮೊಗ್ಗ ಕ್ಷೇತ್ರಕ್ಕೆ ತಮ್ಮ ಪುತ್ರನಿಗೆ ಟಿಕೆಟ್ ಸಿಗುವ ಬಗ್ಗೆ ನಿರೀಕ್ಷೆಯಲ್ಲಿದ್ದರು. ಆದರೆ ಸಿಕ್ಕಿರಲಿಲ್ಲ.