Advertisement

ನರೇಂದ್ರ ಮೋದಿ, ರಾಹುಲ್‌ ಗಾಂಧಿ ವಿರುದ್ಧ ದೂರು: ಇಂದು ನಿರ್ಧಾರ

02:02 AM Apr 30, 2019 | Sriram |

ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ವಿರುದ್ಧ ದಾಖಲಾಗಿರುವ ನೀತಿ ಸಂಹಿತೆ ಉಲ್ಲಂಘನೆ ದೂರುಗಳ ಕುರಿತು ಚುನಾವಣಾ ಆಯೋಗ ಮಂಗಳವಾರದ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದೆ.

Advertisement

ಮೋದಿ ಮತ್ತು ಶಾ ಪದೇ ಪದೇ ನೀತಿ ಸಂಹಿತೆ ಉಲ್ಲಂ ಸುತ್ತಿದ್ದರೂ ಚುನಾವಣಾ ಆಯೋಗ ಮಾತ್ರ ಮೂಕಪ್ರೇಕ್ಷಕನಂತೆ ಕುಳಿತಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಸೋಮವಾರ ಸುಪ್ರೀಂ ಕೋರ್ಟ್‌ ಮೊರೆಹೋದ ಬೆನ್ನಲ್ಲೇ ಆಯೋಗವು ಸಭೆ ಸೇರುವ ನಿರ್ಧಾರ ಮಾಡಿದೆ. ಕಾಂಗ್ರೆಸ್‌ನ ಅರ್ಜಿ ಪುರಸ್ಕರಿಸಿರುವ ಸುಪ್ರೀಂ ಕೋರ್ಟ್‌, ಮಂಗಳವಾರ ವಿಚಾರಣೆ ನಡೆಸುವುದಾಗಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next