Advertisement

ಲೋಕ ಸಮರಕ್ಕೂ ಮುನ್ನ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಕ್ಕೆ ಮೀಸಲಾತಿ

09:34 AM Jan 07, 2019 | Sharanya Alva |

ನವದೆಹಲಿ:ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಕೈಗೊಂಡಿದೆ.

Advertisement

ಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿ ಅಗತ್ಯವಿರುವುದರಿಂದ ಮಂಗಳವಾರ ಲೋಕಸಭೆಯಲ್ಲಿ ಮೀಸಲಾತಿ ತಿದ್ದುಪಡಿ ವಿಧೇಯಕ ಮಂಡನೆಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಈ ವಿಧೇಯಕ ಜಾರಿಯಿಂದ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜಾತಿಗಳಿಗೆ(ವಾರ್ಷಿಕ 8 ಲಕ್ಷಕ್ಕಿಂತ ಕಡಿಮೆ ಆದಾಯ) ಲಾಭವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸಚಿವ ಸಂಪುಟದಲ್ಲಿ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇ.10ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ಖಚಿತಪಡಿಸಿದೆ ಎಂದು ವರದಿ ವಿವರಿಸಿದೆ.

ಶೇ.50ರಿಂದ ಶೇ.60ಕ್ಕೆ ಮೀಸಲಾತಿ ಪ್ರಮಾಣ ಏರಿಕೆಯಾಗಬೇಕಾಗಿದ್ದರಿಂದ ಸಂವಿಧಾನ ತಿದ್ದುಪಡಿ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಧೇಯಕ ಲೋಕಸಭೆಯಲ್ಲಿ ಹಾಗೂ ರಾಜ್ಯಸಭೆಯಲ್ಲಿ ಮಂಡನೆಯಾಗಿ ಪಾಸ್ ಆಗಬೇಕಾಗಿದೆ. ಬಳಿಕ ರಾಷ್ಟ್ರಪತಿ ಅಂಕಿತ ಬಿದ್ದ ಮೇಲೆ ತಿದ್ದುಪಡಿ ವಿಧೇಯಕ ಜಾರಿಯಾಗಲು ಸಾಧ್ಯ. ಆದರೆ ಇನ್ನೂ 2ಎರಡು ದಿನಗಳ ಕಾಲು ಮುಂದೂಡಿಕೆಯಾಗಲಿರುವ ಕಲಾಪದಲ್ಲಿ ತಿದ್ದುಪಡಿ ವಿಧೇಯಕ ಪಾಸ್ ಆಗುತ್ತದೆಯೇ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಅಲ್ಲದೇ ಮೀಸಲಾತಿ ಪ್ರಮಾಣ ಶೇ.50ಕ್ಕಿಂತ ಹೆಚ್ಚಳವಾಗಬಾರದು ಎಂಬುದಾಗಿ ಸುಪ್ರೀಂಕೋರ್ಟ್ ಕೂಡಾ ತೀರ್ಪು ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next