Advertisement
ಶನಿವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಾಲ್ಕು ವರ್ಷ ಪೂರೈಸಿ ಐದನೇ ವರ್ಷಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
Related Articles
Advertisement
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ವಿಪಕ್ಷಗಳ ಅಜೆಂಡಾವನ್ನು ಸಾರಸಗಟಾಗಿ ತಿರಸ್ಕರಿಸಿದ ಅಮಿತ್ ಶಾ, ನಮ್ಮದು ಭ್ರಷ್ಟಾಚಾರ ಹಾಗೂ ಹಸಿವು ಮುಕ್ತ ಭಾರತದ ಅಜೆಂಡವಾಗಿದೆ ಎಂದು ತಿರುಗೇಟು ನೀಡಿದರು.
ವಿರೋಧ ಪಕ್ಷಗಳ ಒಗ್ಗಟ್ಟಿನಿಂದ ನಾವು ಹೆದರುವುದಿಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ವಿಪಕ್ಷಗಳು ನಮ್ಮ ವಿರುದ್ಧ ಹೋರಾಟ ನಡೆಸಿದ್ದರು, ಆದರೆ ಅದರ ಫಲಿತಾಂಶ ಏನಾಯ್ತು? ನಮಗೆ ಜನ ಬೆಂಬಲ ಇದೆ, ಅದಕ್ಕಿಂತ ಹೊರತಾಗಿ ಬೇರೇನೂ ಇಲ್ಲಿ ನಡೆಯೋದಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು.
ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ(ತೆಲುಗು ದೇಶಂ ಪಾರ್ಟಿ) ನಮ್ಮ ಮೈತ್ರಿಕೂಟದಿಂದ ಹೊರ ನಡೆದಿದ್ದಾರೆ, ಆದರೆ ನಿತೀಶ್ ಕುಮಾರ್ ಜೀ ನಮ್ಮ ಜತೆ ಸೇರಿಕೊಂಡಿದ್ದಾರೆ. ಅಲ್ಲದೇ 2014ರ ನಂತರ ಎನ್ ಡಿಎ ಜೊತೆ 11ಕ್ಕೂ ಅಧಿಕ ಪಕ್ಷಗಳು ಕೈಜೋಡಿಸಿವೆ..ನಮ್ಮ ಎನ್ ಡಿಎ ಕುಟುಂಬ ಸದಸ್ಯರ ಸಂಖ್ಯೆ ಹೆಚ್ಚಾಗಿದೆಯೇ ವಿನಃ ಕಡಿಮೆಯಾಗಿಲ್ಲ ಎಂದು ವಿಪಕ್ಷಗಳಿಗೆ ಟಾಂಗ್ ನೀಡಿದರು.