ಶಹಾಬಾದ: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರ ಸರ್ಕಾರದ ಮೂರು ವರ್ಷದ ಆಡಳಿತಾವ ಧಿಯಲ್ಲಿ ದೇಶ ಅಭಿವೃದ್ಧಿ ಸಾ ಧಿಸಿದೆ. ಅಲ್ಲದೇ ಮೋದಿ ಅವರು ಇಡೀ ವಿಶ್ವದಲ್ಲಿಯೇ ಛಾಪು ಮೂಡಿಸುವಂತ ಕಾರ್ಯ ಕೈಗೊಂಡಿದ್ದಾರೆ ಎಂದು ಮಧ್ಯಪ್ರದೇಶದ ಯುವಜನ ಸೇವೆ ಮತ್ತು ಕ್ರೀಡಾ ಖಾತೆ ಸಚಿವೆ ಯಶೋಧರಾ ರಾಜೇ ಸಿಂಧಿಯಾ ಹೇಳಿದರು.
ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರವಿವಾರ ಆಯೋಜಿಸಲಾಗಿದ್ದ ಮಹಿಳಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಮಹಿಳೆಯರ ಅಭಿವೃದ್ಧಿಗೆ ಸಾಕಷ್ಟು ಯೋಜನೆ ಕೈಗೊಂಡಿದೆ.
ಒಲೆ ಮುಂದೆ ಕುಳಿತು ಮಹಿಳೆಯರು ಅನುಭವಿಸುವ ಕಷ್ಟ ಅರಿತು ಉಜ್ವಲ್ ಯೋಜನೆ ಜಾರಿಗೆ ತಂದಿದ್ದಾರೆ. ಇದರ ಮೂಲಕ ಬಡ ಮಹಿಳೆಯರಿಗೆ ಉಚಿತ ಗ್ಯಾಸ್ ವಿತರಣೆ, ಸ್ವತ್ಛ ಭಾರತ ಯೋಜನೆಯಡಿ ಮಹಿಳೆಯರಿಗೆ ಶೌಚಾಲಯ ನಿರ್ಮಾಣ, ಬೇಟಿ ಪಡಾವೋ, ಬೇಟಿ ಬಚಾವೋ ಸೇರಿದಂತೆ ಅನೇಕ ಯೋಜನೆ ಜಾರಿಗೆ ತಂದಿದ್ದಾರೆ ಎಂದು ಹೇಳಿದರು.
ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಭಾರತಿಶೆಟ್ಟಿ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರಕಾರ ಅನ್ನಭಾಗ್ಯ ಹಾಗೂ ಶಾದಿಭಾಗ್ಯ ಯೋಜನೆಗಳನ್ನು ಕೇವಲ ಕೆಲವು ಸಮುದಾಯಗಳಿಗೆ ನೀಡುವ ಮೂಲಕ ಜನರಿಗೆ ಮತ್ತು ಮಹಿಳಾ ಸಮುದಾಯಕ್ಕೆ ಅಪಮಾನ ಮಾಡುತ್ತಿದೆ ಎಂದು ದೂರಿದರು.
ಮಾಜಿ ಸಚಿವ ರೇವೂನಾಯಕ ಬೆಳಮಗಿ, ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ ನರಬೋಳಿ, ವಾಲ್ಮೀಕ ನಾಯಕ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಶಶಿಕಲಾ ಟೆಂಗಳಿ ಮಾತನಾಡಿದರು. ಮಾಜಿ ಸಚಿವ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಾಬುರಾವ ಚವ್ಹಾಣ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ, ಅಮರನಾಥ ಪಾಟೀಲ,
-ಮಾಜಿ ಸದಸ್ಯ ಶಶೀಲ ಜಿ. ನಮೋಶಿ, ರಾಷ್ಟ್ರೀಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಪಾಟೀಲ ರೇವೂರ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುಜಾತಾ ಪಾಟೀಲ, ಜಿಪಂ ಅಧ್ಯಕ್ಷೆ ಸುವರ್ಣ ಮಾಲಾಜಿ, ಉಪಾಧ್ಯಕ್ಷೆ ಶೋಭಾ ಸಿರಸಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಗಿರಥಿ ಶ್ರೀಶೈಲ ಗುನ್ನಾಪುರ,
-ಪ್ರಧಾನ ಕಾರ್ಯದರ್ಶಿ ಇಂದಿರಾ ವಿ. ರೆಡ್ಡಿ, ಸುನೀತ ರಾಠೊಡ, ಪಾರ್ವತಿ ಪವಾರ, ನಗರ ಉಪಾಧ್ಯಕ್ಷೆ ಜಗದೇವಿ ಶರಬಣ್ಣ ಪಟ್ಟೇದಾರ ಪಾಲ್ಗೊಂಡಿದ್ದರು. ರಾಜು ಕೋಬಾಳ ಪ್ರಾರ್ಥಿಸಿದರು. ಜ್ಯೋತಿ ಶರ್ಮಾ ಸ್ವಾಗತಿಸಿದರು. ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ದಿವ್ಯಾ ರಾಜೇಶ ಹಾಗರಗಿ ಪ್ರಸ್ತಾವಿಕವಾಗಿ ಮಾತನಾಡಿದರು. ಚಂದ್ರಕಲಾ ನಿರೂಪಿಸಿ, ವಂದಿಸಿದರು.