Advertisement

ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಭೇಟಿಯಾದ ನರೇಂದ್ರ ಮೋದಿ

09:22 AM Sep 24, 2021 | Team Udayavani |

ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಭೇಟಿ ಮಾಡಿದರು. ಈ ಭೇಟಿಯ ವೇಳೆ ಉಭಯ ನಾಯಕರು ಹಲವು ವಿಷಯಗಳನ್ನು ಚರ್ಚೆ ಮಾಡಿದರು.

Advertisement

ಶೀಘ್ರದಲ್ಲೇ ಲಸಿಕೆ ರಫ್ತುಗಳನ್ನು ಪುನರಾರಂಭಿಸುವುದಾಗಿ ಭಾರತದ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ಭಾರತವು ಪ್ರಸ್ತುತ ದಿನಕ್ಕೆ 10 ಮಿಲಿಯನ್ ಜನರಿಗೆ ಲಸಿಕೆ ಹಾಕುತ್ತಿರುವುದು ವಿಶೇಷವಾಗಿ ಗಮನಿಸಬೇಕಾದ ಸಂಗತಿ ಎಂದು ಕಮಲಾ ಹ್ಯಾರಿಸ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ತಿಳಿಸಿದರು.

“ಭಾರತ ಮತ್ತು ಅಮೆರಿಕಾ ರಾಷ್ಟ್ರಗಳು ಸಹಜ ಪಾಲುದಾರರಾಗಿವೆ. ನಮ್ಮಲ್ಲಿ ಒಂದೇ ರೀತಿಯ ಮೌಲ್ಯಗಳು, ಭೌಗೋಳಿಕ ಹಾಗೂ ರಾಜಕೀಯ ಹಿತಾಸಕ್ತಿಗಳಿವೆ” ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಇದನ್ನೂ ಓದಿ:ಪಿಎಂಒ, ಜಡ್ಜ್ ಹೆಸರಲ್ಲೂ ವಂಚಕ ದಂಪತಿ ಕರಾಮತ್ತು

ಇದೇ ಸಂದರ್ಭದಲ್ಲಿ ಅಮೆರಿಕ ಉಪಾಧ್ಯಕ್ಷರಾಗಿ ನಿಮ್ಮ ಆಯ್ಕೆಯು ಒಂದು ಐತಿಹಾಸಿಕ ಘಟನೆಯಾಗಿದೆ. ನೀವು ಪ್ರಪಂಚದಾದ್ಯಂತ ಅನೇಕರಿಗೆ ಸ್ಫೂರ್ತಿಯಾಗಿದ್ದೀರಿ. ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ನೇತೃತ್ವದಲ್ಲಿ ಭಾರತ-ಅಮೆರಿಕ ಸಂಬಂಧಗಳು ಹೊಸ ಎತ್ತರವನ್ನು ತಲುಪುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next