Advertisement

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

03:43 PM Nov 30, 2021 | Team Udayavani |

ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

Advertisement

ಸಂಸತ್ ನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು ಈ ಇಬ್ಬರೂ ನಾಯಕರು ಸಂಸತ್ ನಲ್ಲಿ ಮಾತುಕತೆ ನಡೆಸಿದರು. ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, “ ಇಂದು ಸಂಸತ್ತಿನಲ್ಲಿ ನಮ್ಮ ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡರ ಜೊತೆ ಉತ್ತಮ ಸಭೆ ನಡೆಸಿದ್ದೇವೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಕೋವಿಡ್ ಹೆಚ್ಚಾದರೆ ಹಿಂದೆ ಇದ್ದ ನಿಯಮಗಳೇ ಜಾರಿ: ಸಚಿವ ಅಶೋಕ್

ಮೂರು ರೈತ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಾಸ್ ಪಡೆದ ಹಿನ್ನೆಲೆಯಲ್ಲಿ ದೇವೇಗೌಡರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ವಿಧಾನ ಪರಿಷತ್ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಉಭಯ ನಾಯಕರ ಭೇಟಿ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾಗಿದೆ.

 

Advertisement

ಇಂದು ನಾನು ಸಂಸತ್ತಿನ ಪ್ರಧಾನಮಂತ್ರಿ ಅವರ ಕಛೇರಿಯಲ್ಲಿ ಶ್ರೀ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿಯಾದೆ. ಅವರ ಸಮಯ ಮತ್ತು ಆಸಕ್ತಿಗಾಗಿ ನಾನು ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಎಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next