Advertisement

Narendra Modi ಪ್ರಮಾಣವಚನ: ಸಿಎಂ ಸಿದ್ದರಾಮಯ್ಯ ಅಭಿನಂದನೆ

11:33 PM Jun 09, 2024 | Team Udayavani |

ಬೆಂಗಳೂರು: ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Advertisement

ಸಿಎಂ ‘3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಕರುನಾಡಿನ ಅಭಿವೃದ್ಧಿಯ ನಮ್ಮ ಸಂಕಲ್ಪಕ್ಕೆ ನಿಮ್ಮ ಸಹಕಾರ ಇರಲಿದೆ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿಯುತ್ತಾ ರಾಜ್ಯಗಳ ಹಿತಾಸಕ್ತಿಯನ್ನು ನೀವು ಗೌರವಿಸುತ್ತೀರೆಂದು ಭಾವಿಸಿದ್ದೇನೆ.ಸಂಪದ್ಭರಿತ ಕರ್ನಾಟಕದ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ನಿಮ್ಮ ಜತೆಯಾಗಿ ಶ್ರಮಿಸುವ ದಿನಗಳನ್ನು ಎದುರು ನೋಡುತ್ತಿದ್ದೇನೆ.” ಎಂದು ಎಕ್ಸ್ ಪೋಸ್ಟ್ ಮಾಡಿದ್ದಾರೆ.

ಪ್ರಮಾಣವಚನ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷಮಲ್ಲಿಕಾರ್ಜುನ ಖರ್ಗೆ ಅವರು ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next