Advertisement

ಸಂಚುಕೋರರ ಶಿಕ್ಷಿಸಲು ಬದ್ಧ: ಇಸ್ರೇಲ್‌ ಪ್ರಧಾನಿಗೆ ಮೋದಿ

10:00 PM Feb 01, 2021 | Team Udayavani |

ನವದೆಹಲಿ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ, ಕಳೆದ ವಾರ ನವದೆಹಲಿಯ ಇಸ್ರೇಲಿ ರಾಯಭಾರ ಕಚೇರಿಯ ಹೊರಗೆ ನಡೆದ ಸ್ಫೋಟಕ್ಕೆ ಸಂಬಂಧಿಸಿ ಮಾತನಾಡಿದ್ದಾರೆ.

Advertisement

ಇಸ್ರೇಲಿ ಪ್ರತಿನಿಧಿಗಳನ್ನು ಸುರಕ್ಷಿತವಾಗಿಡುವಲ್ಲಿ ಭಾರತ ಸರ್ಕಾರ ಮಾಡಿದ ಪ್ರಯತ್ನವನ್ನು ಅವರು ಶ್ಲಾಘಿಸಿ, ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ್ದಾರೆ. ಇದೇ ವೇಳೆ, ಭಯೋತ್ಪಾದನಾ ಕೃತ್ಯವನ್ನು ಕಟು ಶಬ್ದಗಳಲ್ಲಿ ಖಂಡಿಸಿರುವ ಮೋದಿ, ಭಾರತವು ತನ್ನೆಲ್ಲ ಸಂಪನ್ಮೂಲಗಳನ್ನೂ ಬಳಸಿಕೊಂಡು ಸ್ಫೋಟಕ್ಕೆ ಕಾರಣರಾದವರನ್ನು ಪತ್ತೆ ಹಚ್ಚಿ, ಶಿಕ್ಷೆ ನೀಡಲು ಬದ್ಧವಾಗಿದೆ ಎಂದಿದ್ದಾರೆ.

ಪ್ರಕರಣದಲ್ಲಿ ಎರಡೂ ದೇಶಗಳ ಭದ್ರತಾ ಸಂಸ್ಥೆಗಳ ಸಮನ್ವಯತೆಯ ಕುರಿತು ಉಭಯ ನಾಯಕರು ಮೆಚ್ಚುಗೆ ಹಾಗೂ ತೃಪ್ತಿ ವ್ಯಕ್ತಪಡಿಸಿದ್ದಾರೆ.

ಕಳೆದ ಶುಕ್ರವಾರ ಇಸ್ರೇಲಿ ರಾಯಭಾರ ಕಚೇರಿಯ ಹೊರಗೆ ಅಲ್ಪ ತೀವ್ರತೆಯ ಎಲ್ಇಡಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಯಾರೂ ಗಾಯಗೊಂಡಿರಲಿಲ್ಲ. ಆದರೆ, ಕೆಲವು ವಾಹನಗಳಿಗೆ ಹಾನಿಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next