ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ಹಿಂದೂ ದೇಶವನ್ನವಾಗಿ ಮಾಡಲು ಹೊರಟಿದ್ದಾರೆ. ಆದರೆ ನನ್ನ ಜನ್ಮ ಇರೋವವರೆಗೆ ನನ್ನ ಕರ್ನಾಟಕವನ್ನು ಹಿಂದೂ ರಾಜ್ಯವನ್ನಾಗಿ ಮಾಡಲು ಬಿಡಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಶುಕ್ರವಾರ ಕಲಬುರಗಿಯಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ಪಕ್ಷದ ಕಾರ್ಯಕರ್ತರು ಈಗಾಗಲೇ ಸಿದ್ಧವಾಗಬೇಕು. ಅಲ್ಲದೇ ಜಾತ್ಯತೀ ಶಕ್ತಿಗಳು ಒಂದಾಗಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ದೇವೇಗೌಡರು, ನಾನು ಬದುಕಿರುವವರೆಗೂ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿಸಲು ಅವಕಾಶ ಕೊಡಲ್ಲ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಕಾರವಾರ ಬಿಜೆಪಿ ಸಂಸದ, ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಅವರ ಹೆಸರನ್ನು ಹೇಳದೆ ತಿರುಗೇಟು ನೀಡಿದ ಅವರು, ಕಾರವಾರದ ವ್ಯಕ್ತಿಯೊಬ್ಬರು ಇತ್ತೀಚೆಗೆ ಕನ್ನಡ ಖಾಸಗಿ ನ್ಯೂಸ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ದ್ವೇಷದ ಮಾತುಗಳನ್ನು ಹೇಳಿದ್ದಾರೆ. ಅಂದರೆ ಪ್ರಧಾನಿ ಮೋದಿ ಅವರು ದೇಶವನ್ನು ಹಿಂದೂ ರಾಷ್ಟ್ರವನ್ನಾಗಿಸಲು ಹೊರಟಿದ್ದಾರೆಯೇ ಎಂದು ಪ್ರಶ್ನಿಸಿದರು.
ಆದರೆ ಇದು ನಾನು ಬದುಕಿರುವವರೆಗೂ ಸಾಧ್ಯವಿಲ್ಲ. ಭಾರತ ಎಲ್ಲಾ ಸಮುದಾಯಕ್ಕೆ ಸೇರಿದ ದೇಶವಾಗಿದೆ. ಇಲ್ಲಿ ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯಿಂದ ಬಾಳಬೇಕಾಗಿದೆ ಎಂದು ಹೇಳಿದರು.