Advertisement

Kalaburagi; “ಸಾಕ್ಷಾತ್ ಶ್ರೀರಾಮನನ್ನು ಕಂಡಂತಾಯಿತು..”: ಮೋದಿ ಕಂಡು ಬಿಜೆಪಿ ಮುಖಂಡರ ಮಾತು

11:51 AM Jan 19, 2024 | Team Udayavani |

ಕಲಬುರಗಿ: “ಸಾಕ್ಷಾತ್ ಶ್ರೀರಾಮನನ್ನು ಕಂಡಂತೆ ಆಯಿತು..”.

Advertisement

ಇದು ಶುಕ್ರವಾರ ನವದೆಹಲಿಯಿಂದ ವಿಶೇಷ ವಿಮಾನ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದು‌ ನೆರೆಯ ಮಹಾರಾಷ್ಟ್ರದ ಸೋಲಾಪುರಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸುವ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಪ್ರಧಾನಿಗೆ ಹೇಳಿದ ಮಾತು.

ಇದಕ್ಕೆ ಪ್ರಧಾನಿ ‌ಮೋದಿ ಆಕಾಶದತ್ತ ಮಾತ್ರ ಬೆರಳು ತೋರಿಸಿ ಎಲ್ಲ ಆ ದೈವನ ಇಚ್ಚೆ ಎಂದು ಹೇಳಿದರು.

ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ತವರೂರಾಗಿರುವ ಇಲ್ಲಿನ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 9.32 ಕ್ಕೆ ಆಗಮಿಸಿದ ಪ್ರಧಾನಿ ಎಲ್ಲರ ಸ್ವಾಗತ ಸ್ವೀಕರಿಸಿ 9.50 ಕ್ಕೆ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಸೋಲಾಪುರಕ್ಕೆ ತೆರಳಿದರು.

ನವದೆಹಲಿಯಿಂದ ಇಂಡಿಯನ್ ಏರ್ ಪೋರ್ಸ್ ವಿಶೇಷ ವಿಮಾನದ ಮೂಲಕ ಬಂದಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಾಜ್ಯ ಶಿಷ್ಟಾಚಾರದಂತೆ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು.

Advertisement

ರಾಜ್ಯ ಸರ್ಕಾರದ ಪರವಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸ್ವಾಗತಿಸಿದರು. ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ಹೊಸ ನವೀಕರಣ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ, ಮೇಯರ್ ವಿಶಾಲ ದರ್ಗಿ, ಸಂಸದ‌ ಡಾ. ಉಮೇಶ ಜಾಧವ, ಶಾಸಕರಾದ ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ, ಶಶೀಲ ಜಿ. ನಮೋಶಿ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ, ಶಾಸಕ ಶಶೀಲ್ ನಮೋಶಿ, ಬಿ.ಜಿ.ಪಾಟೀಲ್, ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ, ಸುಭಾಷ್ ಆರ್. ಗುತ್ತೇದಾರ, ದತ್ತಾತ್ರೇಯ ಪಾಟೀಲ್ ರೇವೂರ, ಅಮರನಾಥ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ರದ್ದೇವಾಡಗಿ, ನಗರಾಧ್ಯಕ್ಷ ಚಂದು ಪಾಟೀಲ್, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್. ಚೇತನ ಕುಮಾರ, ಎಸ್.ಪಿ. ಅಡ್ಡೂರು ಶ್ರೀನಿವಾಸಲು ಅವರು ಹೂಗುಚ್ಚ ನೀಡಿ ಪ್ರಧಾನಮಂತ್ರಿಗಳನ್ನು ಬರಮಾಡಿಕೊಂಡರು.

ನಂತರ ಪ್ರಧಾನಮಂತ್ರಿಗಳು ಇಂಡಿಯನ್ ಏರ್ ಫೋರ್ಸ್ ಹೆಲಿಕಾಪ್ಟರ್ ಮೂಲಕ ಸೋಲಾಪುರಕ್ಕೆ ಪ್ರಯಾಣ ಬೆಳೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next