ಬಂಟ್ವಾಳ: ಪ್ರಧಾನಿ ಮೋದಿ ಅವರ ಉತ್ತಮ ಆಡಳಿತ ವೈಖರಿಯಿಂದ ಬಿಜೆಪಿ ಕಾರ್ಯಕರ್ತರಿಗೆ ಮತದಾರರಲ್ಲಿ ಹೆಮ್ಮೆಯಿಂದ ಮತ ಕೇಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಯಂತೆ ದೇಶದ 130 ಕೋಟಿ ಜನರ ವಿಕಾಸವಾಗಿದೆ. ಸ್ವಾವಲಂಬಿಗಳಾಗಿ ಬದುಕುವ ವ್ಯವಸ್ಥೆ ನಿರ್ಮಾಣವಾಗುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸಚೇತಕ ಕ್ಯಾ| ಗಣೇಶ್ ಕಾರ್ಣಿಕ್ ಹೇಳಿದರು. ಅವರು ಎ. 15ರಂದು ಪುದು ಮಹಾ ಶಕ್ತಿ ಕೇಂದ್ರ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ದೃಷ್ಟಿಕೋನ ಬದಲು
ಪ್ರಪಂಚ ಭಾರತವನ್ನು ನೋಡುವ ದೃಷ್ಟಿ ಕೋನ ಬದಲಾಗುತ್ತಿದೆ. ಮೋದಿ ಅವರು ವಿಶ್ವ ನಾಯಕರಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ ಎಂದು ಅವರು ಅಭಿಪ್ರಾಯಪಟ್ಟರು. ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಜೆ. ಪಾಲೆಮಾರ್, ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಸಂಸದ ನಳಿನ್ ಕುಮಾರ್ ಕಟೀಲು ಪರ ಮತ ಕೋರಿ ಭಾಷಣ ಮಾಡಿದರು.
ವಿಕಾಸ್ ಪುತ್ತೂರು, ಚುನಾವಣಾ ಉಸ್ತು ವಾರಿ ರಾಧಾಕೃಷ್ಣ ಬುಡಿಯಾರ್, ಜಿ.ಪಂ.ಸದಸ್ಯ ರವೀಂದ್ರ ಕಂಬಳಿ, ತಾ.ಪಂ. ಸದಸ್ಯ ಗಣೇಶ್ ಸುವರ್ಣ ತುಂಬೆ, ಎಪಿಎಂಸಿ ಸದಸ್ಯ ವಿಠ್ಠಲ್ ಸಾಲ್ಯಾನ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಶಶಿರಾಜ್ ಶೆಟ್ಟಿ ಕೊಳಂಬೆ, ಪ್ರವೀಣ್ ಶೆಟ್ಟಿ ಸುಜೀರು, ಮನೋಹರ್ ಕೊಟ್ಟಾರಿ, ಜಯಶ್ರೀ ಕರ್ಕೇರ ಮತ್ತಿತರರಿದ್ದರು.
ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮನೋಜ್ ಆಚಾರ್ಯ ನಾಣ್ಯ ಸ್ವಾಗತಿಸಿದರು. ಪುದು ಮಹಾ ಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ಕೊಟ್ಟಿಂಜ ವಂದಿಸಿದರು.