Advertisement
ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನ ಕೊಟ್ಟ ಮಾತಿನಂತೆ ಜಾರಿಗೆ ತಲಾಗುತ್ತಿದೆ. ಈಗ ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯನ್ನ ಕಾರ್ಯರೂಪಕ್ಕೆ ತರಲಾಗಿದೆ. 5.70 ಲಕ್ಷ ಜನ ಈ ಸೌಲಭ್ಯ ಪಡೆದಿದ್ದಾರೆ. ಜನ ಶಕ್ತಿ ಯೋಜನೆಯ ಸಂಭ್ರಮಾಚರಣೆ ಮಾಡಿದ್ದಾರೆ ಜನರ ಪರವಾಗಿ ನಾನು ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
Related Articles
Advertisement
ತಮಿಳುನಾಡಿಗೆ ಹೋಗಿ ಅಮಿತ್ ಶಾ ಅವರು ತಮ್ಮ ಪದಾಧಿಕಾರಿಗಳ ಸಭೆ ನಡೆಸಿದ್ದಾರೆ. ಸಭೆ ನಡೆಸಿ ಎರಡು ಬಾರಿ ತಮಿಳುನಾಡಿನವರು ಪ್ರಧಾನಮಂತ್ರಿ ಆಗಬೇಕಿತ್ತು ಎಂದಿದ್ದಾರೆ. ಈ ಬಾರಿ ತಮಿಳುನಾಡಿನವರು ಪ್ರಧಾನಮಂತ್ರಿಯಾಗಲು ಹಚ್ಚಿನ ಸ್ಥಾನ ಗೆಲ್ಲಿಸಿ ಎಂದು ಕರೆ ನೀಡಿದ್ದಾರೆ. ಅಂದರೆ ಇವರ ಪ್ರಧಾನಿ ಮೋದಿ ವರ್ಚಸ್ಸು ಏನಾಯ್ತು? ಬಿಜೆಪಿ ಹಸಿ ಸುಳ್ಳುಗಳನ್ನು ಹೇಳಿಕೊಂಡು ಓಡಾಡುತ್ತಿದೆ. ಇವರು ದಕ್ಷಿಣ ಭಾರತದವರನ್ನು ಪ್ರಧಾನಿಯಾಗಲು ಅವಕಾಶ ಮಾಡಿಕೊಡುತ್ತಾರಾ? ಅಂತಹ ಅಡ್ವಾಣಿ ಅವರನ್ನೇ ಮೂಲೆಗುಂಪು ಮಾಡಿದವರು ಇವರು ಎಂದು ಹೇಳಿದರು.
ಭ್ರಷ್ಟಾಚಾರದ ತನಿಖೆ: 40% ತನಿಖೆ ನಡೆಸಿ ಎಂಬ ಕುಮಾರಸ್ವಾಮಿ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಉಗ್ರಪ್ಪ, ಕಾಂಗ್ರೆಸ್ ಭ್ರಷ್ಟಾಚಾರವನ್ನು ಎಂದಿಗೂ ಸಹಿಸುವುದಿಲ್ಲ. ಭ್ರಷ್ಟಾಚಾರ ವಿಚಾರವಾಗಿಯೇ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ಹೋರಾಡಿದ್ದರು. ಬಿಜೆಪಿ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ತನಿಖೆ ನಡೆಸಲಾಗುತ್ತಿದೆ. ಇದು ರಾಜ್ಯದ ಹಿತದೃಷ್ಟಿಯಿಂದ ನಡೆಯುತ್ತಿರುವ ತನಿಖೆ. ಇದರ ಹೊರತಾಗಿ ಯಾವುದೇ ಸೇಡಿನ ರಾಜಕೀಯ ಇಲ್ಲ ಎಂದರು.