ಮಹಾರಾಷ್ಟ್ರ : ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಕಾರ್ಖಾನೆಯೊಂದರಲ್ಲಿ ರವಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕಾರ್ಖಾನೆಯೊಳಗೆ ಹಲವಾರು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯಲ್ಲಿ ಕನಿಷ್ಠ 14 ಜನರಿಗೆ ಗಾಯಗಳಾಗಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ.
ಮುಂಡೆಗಾಂವ್ ಗ್ರಾಮದ ಕಾರ್ಖಾನೆಯಲ್ಲಿ ಬೆಳಗ್ಗೆ 11 ಗಂಟೆಗೆ ಬಾಯ್ಲರ್ ಸ್ಫೋಟಗೊಂಡು ಭಾರಿ ಅಗ್ನಿ ಅವಗಢ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಕಾರ್ಖಾನೆಯೊಳಗೆ ಇನ್ನೂ ಕಾರ್ಮಿಕರು ಇರುವ ಶಂಕೆ ವ್ಯಕ್ತವಾಗಿದ್ದು ರಕ್ಷಣಾ ತಂಡ ಕಾರ್ಯಾಚರಣೆ ನಡೆಸುತ್ತಿದೆ.
ಘಟನಾ ಸ್ಥಳಕ್ಕೆ ಹಲವು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
11 ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಇನ್ನೂ ಹಲವರು ಸಿಕ್ಕಿಬಿದ್ದಿದ್ದಾರೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ, ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಉಗಾಂಡಾದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಕನಿಷ್ಠ ಒಂಬತ್ತು ಮಂದಿ ಸಾವು