Advertisement

ಪುನೀತ್ ಹುಟ್ಟುಹಬ್ಬಕ್ಕೆ “ನಟಸಾರ್ವಭೌಮ’ ಫಸ್ಟ್ ಲುಕ್ ಗಿಫ್ಟ್

12:48 PM Mar 17, 2018 | |

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬದ ಸಂಭ್ರಮಕ್ಕೆ “ನಟಸಾರ್ವಭೌಮ’ ಚಿತ್ರತಂಡ ಅಭಿಮಾನಿಗಳಿಗೆ ಉಡುಗೊರೆಯಾಗಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಮಧ್ಯರಾತ್ರಿ 12 ಗಂಟೆಗೆ ಚಿತ್ರತಂಡ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು, ಪುನೀತ್ ಹೊಸ ಹೇರ್ ಸ್ಟೈಲ್‍ನಲ್ಲಿ ಮಿಂಚಿರುವುದು ವಿಶೇಷ.

Advertisement

ಅಲ್ಲದೇ ಅನೇಕ ಕ್ಯಾಮೆರಾಗಳ ಜೊತೆ ನಗು ಮೊಗದ ಪುನೀತ್ ಎಂಟ್ರಿ ಕೊಡೋ ಫಸ್ಟ್ ಲುಕ್ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದ್ದು, ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಜನ ಫಸ್ಟ್ ಲುಕ್ ವೀಕ್ಷಿಸಿದ್ದು, ಚಿತ್ರದ ಬಗ್ಗೆ ಸಿನಿಪ್ರಿಯರಿಗೆ ಸಾಕಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದೆ.

ಇನ್ನು ರಾಕ್‌ಲೈನ್‌ ವೆಂಕಟೇಶ ನಿರ್ಮಾಣದ ಈ ಚಿತ್ರವನ್ನು ಪವನ್‌ ಒಡೆಯರ್‌ ನಿರ್ದೇಶಿಸುತ್ತಿದ್ದು, ರಚಿತಾ ರಾಮ್‌ ಪುನೀತ್ ಎದುರಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಇಮಾನ್‌ ಡಿ ಸಂಗೀತ ಹಾಗೂ ವೈದಿ ಛಾಯಾಗ್ರಹಣ ಚಿತ್ರಕ್ಕಿದೆ.

Advertisement

Udayavani is now on Telegram. Click here to join our channel and stay updated with the latest news.

Next