Advertisement

ನಾಳೆಯಿಂದ ಅರಭಾವಿಯಲ್ಲಿ ರಾಷ್ಟ್ರೀಯ ಸಮ್ಮೇಳನ

12:38 PM Dec 18, 2019 | Team Udayavani |

ಮೂಡಲಗಿ: ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಡಿ ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ, ಅರಭಾವಿಯ ಬೆಳ್ಳಿಹಬ್ಬದ ಸಂಭ್ರಮಾಚರಣೆ ಅಂಗವಾಗಿ ಡಿ.19 ಮತ್ತು 20ರಂದು “ತೋಟಗಾರಿಕಾ ಸುಸ್ಥಿರತೆ ಮತ್ತು ಪೌಷ್ಟಿಕ ಭದ್ರತೆ’ ಶೀರ್ಷಿಕೆಯಡಿ ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯಲ್ಲಿ ರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಮಹಾವಿದ್ಯಾಲಯದ ಡೀನ್‌ ಡಾ| ನಾಗೇಶ ನಾಯ್ಕ ಹೇಳಿದರು.

Advertisement

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದಲ್ಲಿ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಗುಜರಾತ, ಅಸ್ಸಾಂ ಮತ್ತು ಮಹರಾಷ್ಟ್ರರಾಜ್ಯಗಳಿಂದ ಸುಮಾರು 300ಕ್ಕೂ ಹೆಚ್ಚು ಕೃಷಿ ಸಂಶೋಧಕರು, ವಿಷಯ ತಜ್ಞರು ಭಾಗವಹಿಸುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡದಲ್ಲಿರುವ ಪರಿಣಿತ ರೈತರಂತೆ ಬೆಳಗಾವಿ ಜಿಲ್ಲೆಯಲ್ಲಿಯೂ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿದ್ದು ಅವರು ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಕಾರ್ಯಕ್ರಮ ಸಂಯೋಜಕ ಡಾ| ಕೆ. ರಾಮಚಂದ್ರ ನಾಯ್ಕ ಮಾತನಾಡಿ, ವೈಜ್ಞಾನಿಕ ಸಮಾವೇಶದಲ್ಲಿ ಬೇರೆ ಬೇರೆ ರಾಜ್ಯಗಳ ವಿದ್ಯಾರ್ಥಿಗಳಿಂದ 180 ಪ್ರಬಂಧ ಮಂಡನೆಯಾಗುತ್ತಿವೆ. ರಾಷ್ಟ್ರಮಟ್ಟದ 15 ಜನ ಆಹ್ವಾನಿತ ಖ್ಯಾತ ವಿಜ್ಞಾನಿಗಳು ಭಾಗವಹಿಸುವರು. ಬಿಎಸ್ಸಿ, ಎಂಎಸ್‌ಇ, ಯುವ ರೈತ ವಿಜ್ಞಾನಿಗಳು-ಕೃಷಿ ಸಾಧಕರು ಸಮ್ಮೇಳನದಲ್ಲಿ ಭಾಗವಹಿಸಲು ಉತ್ಸುಕರಾಗಿದ್ದಾರೆ ಎಂದರು.

ಕೆಎಂಎಫ್‌ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಸಮ್ಮೇಳನ ಉದ್ಘಾಟಿಸುವರು. ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ| ಕೆ.ಎಂ. ಇಂದಿರೇಶ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ರಾಯಚೂರು ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ| ಕೆ.ಎನ್‌. ಕಟ್ಟಿಮನಿ, ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಸದಸ್ಯ ಡಾ| ಯೋಗಿರಾಜ ಬಿ. ಪಾಟೀಲ್‌, ನವದೆಹಲಿ ಭಾರತೀಯ ಕೃಷಿ ಅನುಸಂದಾನ ಪರಿಷತ್ತಿನ ಸಹಾಯಕ ಮಹಾ ನಿರ್ದೇಶಕ ಬಾಗಲಕೋಟೆ ತೋ.ವಿ.ವಿ ಆಡಳಿತ ಮಂಡಳಿ ಸದಸ್ಯ ಡಾ| ಟಿ. ಜಾನಕಿರಾಮ, ಕೃಷಿ ವಿಶ್ವವಿದ್ಯಾಲಯ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ| ಎಸ್‌.ಎ. ಪಾಟೀಲ್‌ ಇತರರು ಭಾಗವಹಿಸುವರು.

ಕಾರ್ಯಾಗಾರದಲ್ಲಿ ಸುಮಾರು 300 ನೂರು ವಿಜ್ಞಾನಿಗಳು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ತೋಟಗಾರಿಕೆ ಬೆಳೆಗಳಾದ ತರಕಾರಿ, ಹಣ್ಣು, ಹೂವು, ಸಾಂಬಾರು, ತೋಟಪಟ್ಟಿ, ಔಷಧ ಹಾಗೂ ಸುಗಂಧ ದ್ರವ್ಯ ಬೆಳೆಗಳು ಮತ್ತು ಕೊಯ್ಲೋತ್ತರ ತಂತ್ರಜ್ಞಾನದಲ್ಲಿ ಆಗಿರುವ ಆಧುನಿಕ ಸಂಶೋಧನೆ ಮತ್ತು ತಂತ್ರಜ್ಞಾನ ಮಂಡಿಸಲಿದ್ದಾರೆ ಎಂದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಡಾ| ಸಿ.ಎನ್‌. ಹಂಚಿನಮನಿ, ಡಾ| ದಿಲೀಪ ಮಸೂತಿ, ಡಾ| ಕಾಂತರಾಜ.ವಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next