ಹೊಸದಿಲ್ಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 21,257 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ದೇಶದ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 3,39,15,569ಕ್ಕೆ ಏರಿಕೆಯಾಗಿದೆ.
ಈ ಅವಧಿಯಲ್ಲಿ ದೇಶದಲ್ಲಿ 271 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ದೇಶದಲ್ಲಿ ಇದುವರೆಗೆ 4,50,127 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದ ಐದು ರಾಜ್ಯಗಳಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿದೆ. ಕೇರಳ ರಾಜ್ಯದಲ್ಲಿ 12,288 ಪ್ರಕರಣಗಳು ವರದಿಯಾಗಿದೆ. ಉಳಿದಂತೆ ಮಹಾರಾಷ್ಟ್ರದಲ್ಲಿ 2,681 ಪ್ರಕರಣಗಳು, ತಮಿಳುನಾಡು ರಾಜ್ಯದಲ್ಲಿ 1,390 ಪ್ರಕರಣಗಳು, ಮಿಜೋರಾಂ ನಲ್ಲಿ 1,080 ಪ್ರಕರಣಗಳು ಮತ್ತು ಪಶ್ಚಿಮ ಬಂಗಾಳ ರಾಜ್ಯದಲ್ಲಿ 771 ಕೋವಿಡ್ ಪ್ರಕರಣಗಳು ವರದಿಯಾಗಿದೆ.
ಇದನ್ನೂ ಓದಿ:ಕೊಲೆ ಕೇಸ್ : ಗುರ್ಮಿತ್ ರಾಮ್ ರಹೀಮ್ ಸಿಂಗ್ ಸೇರಿ ಐವರಿಗೆ ಶಿಕ್ಷೆ
ಈ ಐದು ರಾಜ್ಯದಲ್ಲೇ ದೇಶದ ಶೇ. 85.67 ರಷ್ಟು ಕೋವಿಡ್ ಪ್ರಕರಣಗಳು ವರದಿಯಾಗಿದೆ. ಕೇರಳ ರಾಜ್ಯವೊಂದೇ ದೇಶದ ಶೇ.57.81 ಕೋವಿಡ್ ಪ್ರಕರಣಗಳಿಗೆ ಕಾರಣವಾಗಿದೆ.
ಶುಕ್ರವಾರ ಬೆಳಿಗ್ಗೆಯವರೆಗೆ ಕಳೆದ 24 ಗಂಟೆಗಳಲ್ಲಿ ಕೋವಿಡ್ -19 ಸೋಂಕಿನಿಂದ 24,963 ರೋಗಿಗಳು ಚೇತರಿಸಿಕೊಂಡಿದ್ದರೂ ಸಹ, ಭಾರತದ ಚೇತರಿಕೆಯ ಪ್ರಮಾಣವು ಶೇಕಡಾ 97.96 ರಷ್ಟಿದೆ, ಇದರಿಂದ ದೇಶಾದ್ಯಂತ ಇದುವರೆಗೆ ಒಟ್ಟು 3,32,25,221 ಮಂದಿ ಕೋವಿಡ್ ಸೋಂಕಿನಿಂದ ಚೇತರಿಕೆ ಕಂಡಿದ್ದಾರೆ.