Advertisement
ಸಿಎಂಆರ್ ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
Related Articles
Advertisement
ದೇಶದ ಯುವಜನರು ಕೌಶಲ್ಯ ತರಬೇತಿ ಪಡೆದು, ಈಗಿನ ಕಾಲಕ್ಕೆ ಅನುಗುಣವಾಗಿ ತಯಾರಾಗುವಂತೆ ಮಾಡುವುದು ಹೊಸ ಶಿಕ್ಷಣ ನೀತಿಯ ಗುರಿಯಾಗಿದೆ. ಇದಕ್ಕಾಗಿ ಶಿಕ್ಷಣದ ಮೂಲಸೌಕರ್ಯವನ್ನು ಹೆಚ್ಚಿಸಲಾಗುತ್ತಿದೆ. 2014 ರಿಂದ ಹೊಸ ಮೆಡಿಕಲ್ ಕಾಲೇಜುಗಳ ನಿರ್ಮಾಣದ ಪ್ರಮಾಣ 55% ಹೆಚ್ಚಾಗಿದೆ ಎಂದರು.
ಇದನ್ನೂ ಓದಿ:ಶಬರಿಮಲೆಗೆ ಹೊರಟಿದ್ದ ಯಾತ್ರಾರ್ಥಿಗಳ ಬಸ್ ಪಲ್ಟಿ: 18 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ
ನಾಯಿಗಳಿಗೆ ಆಶ್ರಯ ನೀಡುವ ಸಿಎಂಆರ್ ಸಂಸ್ಥೆಯ ಈ ಕಾರ್ಯ ಯಶಸ್ವಿಯಾಗಿದೆ. ಇದಕ್ಕಾಗಿ ಎಲ್ಲರಿಗೂ ಶುಭ ಕೋರುತ್ತೇನೆ. ಈಗಿನ ಕಾಲದಲ್ಲಿ ಪರಿಸರ ಮಾಲಿನ್ಯದಿಂದಾಗಿ ಅನೇಕ ಜೀವಿಗಳಿಗೆ ತೊಂದರೆಯಾಗಿದೆ. ಕೆಲ ಜೀವಿಗಳು ಅಳಿವಿನಂಚಿಗೆ ಬಂದಿವೆ. ಭೂಮಿಯು ಮಾನವನ ಅವಶ್ಯಕತೆಗೆ ಇರುವುದೇ ಹೊರತು ದುರಾಸೆಗಲ್ಲ. ಬೇರೆ ಜೀವಿಗಳು ಕೂಡ ಈ ಭೂಮಿಯಲ್ಲಿದೆ ಹಾಗೂ ಮಾನವನಂತೆಯೇ ಅವುಗಳಿಗೂ ಬದುಕುವ ಹಕ್ಕು ಇದೆ ಎಂಬುದನ್ನು ಮರೆತೇಬಿಟ್ಟಿದ್ದೇವೆ. ಈ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಸಿಎಂಆರ್ ಸಂಸ್ಥೆಯನ್ನು ಶ್ಲಾಘಿಸುತ್ತೇನೆ ಎಂದರು.
ಸಿಎಂಆರ್ ಶಿಕ್ಷಣ ಸಂಸ್ಥೆಯು ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೂ ಸೇವೆ ನೀಡುತ್ತಿರುವುದು ಶ್ಲಾಘನೀಯ. ಸಂಸ್ಥೆಯ ಲೋಗೋ ಕೂಡ ಉನ್ನತ ಮೌಲ್ಯಗಳನ್ನು ಬಿಂಬಿಸುತ್ತದೆ. ಇದೇ ರೀತಿ ಎಲ್ಲಾ ವಿಶ್ವವಿದ್ಯಾಲಯಗಳು ಕಾರ್ಯ ನಿರ್ವಹಿಸಲಿ ಎಂದರು.
ಸೋಲಾರ್ ವಿದ್ಯುತ್ ಬಳಕೆಗೆ ಸರ್ಕಾರ ಒತ್ತು ನೀಡಿದೆ. ಹೊಸ ಸಂಶೋಧನೆಗಳ ಮೂಲಕ ಸೋಲಾರ್ ಕ್ಷೇತ್ರದಲ್ಲಿ ಬದಲಾವಣೆ ತರಬೇಕಿದ್ದು, ಇದಕ್ಕಾಗಿ ಎಲ್ಲರೂ ಸಹಯೋಗ ನೀಡಬೇಕು ಎಂದರು.
ಮೆಡಿಕಲ್ ಕಾಲೇಜು ಆರಂಭಿಸಿ: ಮುಂದಿನ ದಿನಗಳಲ್ಲಿ ತಾವು ಕೂಡ ಹೊಸ ಮೆಡಿಕಲ್ ಕಾಲೇಜು ಆರಂಭಿಸಬೇಕು ಎಂದು ಸಚಿವ ಡಾ.ಕೆ.ಸುಧಾಕರ್, ಸಿಎಂಆರ್ ವಿಶ್ವವಿದ್ಯಾಲಯದ ಮುಖ್ಯಸ್ಥರಾದ ಕೆ.ಸಿ.ರಾಮಮೂರ್ತಿ ಅವರಿಗೆ ಸಲಹೆ ನೀಡಿದರು.