Advertisement

ಪುಸ್ತಕದ ಹೊರೆ ಕಡಿಮೆಯಾಗಲಿದೆ; ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ

11:50 AM Aug 07, 2020 | Nagendra Trasi |

ನವದೆಹಲಿ: ಹೊಸ ಶಿಕ್ಷಣ ನೀತಿಯಲ್ಲಿ ಯಾವುದೇ ಭೇದ, ಭಾವ ಇಲ್ಲ. ಪ್ರತಿಯೊಂದು ದೇಶವು ತನ್ನ ಶಿಕ್ಷಣ ನೀತಿಯೊಂದಿಗೆ ಬೆಳೆಯುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ ನವಭಾರತದ ಸಂಕೇತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Advertisement

ಅವರು ರಾಷ್ಟ್ರೀಯ ಶಿಕ್ಷಣ ನೀತಿಯಡಿ ಉನ್ನತ ಶಿಕ್ಷಣದಲ್ಲಿ ಸುಧಾರಣೆ ಕುರಿತು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿಗಳು ಸಂಶೋಧನೆಯತ್ತ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಯಾರು ಸಣ್ಣವರು, ದೊಡ್ಡವರು ಎಂಬುದಿಲ್ಲ. ದೇಶದ ಹಲವಾರು ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತತೆ ಕಲ್ಪಿಸಿಕೊಡಲಾಗಿದೆ ಎಂದರು.

ದೇಶಕ್ಕೆ ಉತ್ತಮ ವಿದ್ಯಾರ್ಥಿಗಳು, ಕೌಶಲ್ಯವುಳ್ಳವರು, ಉತ್ತಮ ವ್ಯಕ್ತಿಗಳನ್ನು ಕೊಡುವ ಸಾಮರ್ಥ್ಯ ಶಿಕ್ಷಕರಿಗೆ ಇದೆ. ಹೀಗಾಗಿ ಹೊಸ ಶಿಕ್ಷಣ ನೀತಿ ಜಾರಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಬಹಳ ದೊಡ್ಡ ಬದಲಾವಣೆ ತರಲಿದೆ ಎಂದು ಹೇಳಿದರು.

ಉತ್ತಮ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರದಿಂದ ವಿಶೇಷ ಗೌರವ ಸಿಗಲಿದೆ. ಹೊಸ ಶಿಕ್ಷಣ ನೀತಿಯಲ್ಲಿ ಪುಸ್ತಕದ ಹೊರೆ ಕಡಿಮೆಯಾಗಲಿದೆ. ಸದ್ಯ ಓದುತ್ತಿರುವ ಕಲಿಕೆ ಬಗ್ಗೆ ಆಸಕ್ತಿ ಇಲ್ಲದಿದ್ದರೆ, ಬೇರೆ ಕೋರ್ಸ್ ಆಯ್ಕೆ ಮಾಡಿಕೊಳ್ಳಲು ಮುಕ್ತ ಅವಕಾಶ ಇದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next