Advertisement

ಅರ್ಧ ಮಟ್ಟದಲ್ಲಿ ರಾಷ್ಟ್ರಧ್ವಜ; ಸಾಗರದಲ್ಲಿ ಗೊಂದಲ

09:47 PM Sep 11, 2022 | Vishnudas Patil |

ಸಾಗರ: ಇಂಗ್ಲೆಂಡ್ ರಾಣಿ 2 ನೇ ಎಲಿಜಬೆತ್ ನಿಧನದ ಗೌರವಾರ್ಥ ಭಾರತದಲ್ಲಿ ಒಂದು ದಿನದ ಶೋಕಾಚರಣೆಯನ್ನು ಕೇಂದ್ರ ಸರ್ಕಾರ ಘೋಷಿಸಿತ್ತು. ಶೋಕಾಚರಣೆಯ ಹಿನ್ನೆಲೆಯಲ್ಲಿ ದೇಶಾದ್ಯಂತ ರಾಷ್ಟ್ರಧ್ವಜಗಳನ್ನು ಅರ್ಧಕ್ಕೆ ಹಾರಿಸಲು ಸೂಚಿಸಿದ್ದರೂ ಗಣಪತಿ ಕೆರೆ ಆವರಣದಲ್ಲಿನ ಬೃಹತ್ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸದ ಹಿನ್ನೆಲೆಯಲ್ಲಿ ಸಾಗರದಲ್ಲಿ ಸಾರ್ವಜನಿಕರಲ್ಲಿ ಗೊಂದಲ ಮೂಡಿದೆ.

Advertisement

ಸಾಗರದಲ್ಲಿ ತಾಲೂಕು ಕಚೇರಿ ಆವರಣದಲ್ಲಿ ಭಾನುವಾರ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಿದ್ದುದು ಕಂಡುಬಂದಿದೆ.ಈ ಬಗ್ಗೆ ನಗರಸಭೆ ಪೌರಾಯುಕ್ತ ಪತ್ರಿಕೆಯೊಂದಿಗೆ ಮಾತನಾಡಿ, ರಾಣಿ ಎಲಿಜಬೆತ್ ನಿಧನಾರ್ಥ ಅರ್ಧ ಹಾರಿಸುವ ಕುರಿತು ಯಾವುದೇ ಸರ್ಕಾರಿ ಆದೇಶ ಬಂದಿಲ್ಲ. ಕಚೇರಿ ಆವರಣಗಳಲ್ಲಿನ ರಾಷ್ಟ್ರ ಧ್ವಜಗಳನ್ನು ಮಾತ್ರ ಹಾರಿಸಬೇಕು. ಶೋಕಾಚರಣೆ ಹಿನ್ನೆಲೆಯಲ್ಲಿ ಅರ್ಧದಲ್ಲಿ ರಾಷ್ಟ್ರಧ್ವಜ ಹಾರಿಸುವ ನಿಯಮ ಅನ್ವಯಗುವುದಿಲ್ಲ ಎಂದು ತಿಳಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next