Advertisement
ಕೆಲ ದಿನಗಳ ಹಿಂದೆ, ಅವರು ಕೊರೊನಾಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಇ.ಡಿ. ಮುಂದೆ ವಿಚಾರಣೆಗೆ ಹಾಜರಾಗಿರಲಿಲ್ಲ. ಹಾಗಾಗಿ, ಅವರಿಗೆ ಕೆಲ ದಿನಗಳ ವಿಶ್ರಾಂತಿಗೆ ಅವಕಾಶ ಕಲ್ಪಿಸಲಾಗಿತ್ತು. ಅನಾರೋಗ್ಯದಿಂದ ಅವರು ಚೇತರಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಈ ತಿಂಗಳ ಆರಂಭದಲ್ಲಿ ಹೊಸ ನೋಟಿಸ್ ಜಾರಿಗೊಳಿಸಿದ್ದ ಇ.ಡಿ., ಜು. 21ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.
ಸೋನಿಯಾ ಅವರನ್ನು ವಿಚಾರಣೆಗೊಳಪಡಿಸಿರುವುದನ್ನು ಖಂಡಿಸಿ, ದೇಶಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜಾಗಿದೆ. ಇತ್ತೀಚೆಗೆ, ರಾಹುಲ್ ಗಾಂಧಿಯವರು ಇ.ಡಿ. ಮುಂದೆ ವಿಚಾರಣೆಗೆ ಹಾಜರಾದಾಗಲೂ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಾಗಿತ್ತು.