Advertisement

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆ ಖಚಿತ: ಬಿಎಸ್‌ವೈ

08:45 AM Jun 16, 2022 | Team Udayavani |

ತುಮಕೂರು: ನ್ಯಾಷನಲ್‌ ಹೆ ರಾಲ್ಡ್‌ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಆದರೂ ಅವರಿಗೆ ಶಿಕ್ಷೆ ಆಗುತ್ತದೆ. ಕಾನೂನಿನ ಮುಂದೆ ಎಲ್ಲರೂ ಒಂದೆ. ಯಡಿಯೂರಪ್ಪ ಆಗಲಿ, ರಾಹುಲ್‌ ಗಾಂಧಿ ಆಗಲಿ, ತಪ್ಪು ಮಾಡಿದ್ದರೆ ಶಿಕ್ಷೆ ಖಚಿತ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

Advertisement

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್‌ಗಾಂಧಿ ಅವರನ್ನು ವಿಚಾರಣೆ ಮಾಡಲಾಗುತ್ತಿದೆ. ಅವರು ತಪ್ಪು ಮಾಡದಿದ್ದರೆ ಆರೋಪ ಮುಕ್ತರಾಗಿ ಹೊರಬರುತ್ತಾರೆ ಎಂದರು.

ವಿಜಯೇಂದ್ರ ಸ್ಪರ್ಧೆ ಖಚಿತ
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಗುಬ್ಬಿ ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ ಖಚಿತ. ಆದರೆ ನಿರ್ದಿಷ್ಟವಾಗಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆಂದು ಹೇಳಲು ಸಾಧ್ಯವಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next