ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣಕಾಸು ಅವ್ಯವಹಾರ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಐದನೇ ದಿನವೂ ವಿಚಾರಣೆ ನಡೆಸಿದೆ.
ಮಂಗಳವಾರ ಬೆಳಗ್ಗೆ 11.15ರ ಸಮಯಕ್ಕೆ ರಾಹುಲ್ ಇ.ಡಿ ಕಚೇರಿಗೆ ಹಾಜರಾಗಿದ್ದಾರೆ. ಇದೇ ವೇಳೆ ರಾಹುಲ್ ವಿಚಾರಣೆ ಖಂಡಿಸಿ, ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಅಲ್ಲಿಂದ ಜಂತರ್ ಮಂತರ್‌ಗೆ ಪ್ರತಿಭಟನಾ ಮೆರವಣಿಗೆ ಹೊರಡಲು ಯತ್ನಿಸಿದಾಗ ಪೊಲೀಸರು ಹಲವು ನಾಯಕರನ್ನು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ನೆಟ್ಟಾ ಡಿಸೋಜ, ಮಹಿಳಾ ಪೊಲೀಸ್ ಅಧಿಕಾರಿಗಳ ಮೇಲೆ ಉಗುಳಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.