Advertisement

ರಾ.ಹೆ. 169ಎ ಹೆಬ್ರಿ-ಪರ್ಕಳ, ಕರಾವಳಿ-ಮಲ್ಪೆ ಅಗಲೀಕರಣಕ್ಕೆ ಕೇಂದ್ರ ಸರಕಾರ ಹಸಿರು ನಿಶಾನೆ

06:42 PM Jun 01, 2021 | Team Udayavani |

ಉಡುಪಿ: ಹೆಬ್ರಿಯಿಂದ ಪರ್ಕಳವರೆಗೆ ಮತ್ತು ಕರಾವಳಿ ಜಂಕ್ಷನ್‌ ನಿಂದ ಮಲ್ಪೆಯವರೆಗಿನ ರಾ.ಹೆ. 169ಎ ರಸ್ತೆಯ ಅಗಲೀಕರಣಕ್ಕೆ ಕೇಂದ್ರ ಸರಕಾರ ಹಸಿರು ನಿಶಾನೆ ನೀಡಿದೆ.

Advertisement

29 ಕಿಲೋಮೀಟರ್‌ ಉದ್ದದ ದ್ವಿಪಥ/ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ 350 ಕೋ.ರೂ.(ಭೂಸ್ವಾಧೀನ ಸಹಿತ) ಅನುದಾನವನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅದೇ ರೀತಿ ರಾಷ್ಟ್ರೀಯ ಹೆದ್ದಾರಿ 169ಎ ಹೆಬ್ರಿ ಸೀತಾನದಿ ಬಳಿಯಲ್ಲಿ ರಿಟೈನಿಂಗ್‌ವಾಲ್‌ ನಿರ್ಮಾಣ, ರಸ್ತೆ ಎತ್ತರಿಸುವುದು ಮತ್ತು ಶೃಂಗೇರಿ ಸಮೀಪದ ನೆಮ್ಮಾರು ಬಳಿ ರಸ್ತೆ ಎತ್ತರಿಸುವುದು, ರಿಟೈನಿಂಗ್‌ ವಾಲ್‌ ನಿರ್ಮಾಣ ಕಾಮ ಗಾರಿಗೆ ಅಂದಾಜು ಮೊತ್ತ 19 ಕೋ.ರೂ.ವನ್ನು ಬಿಡುಗಡೆ ಮಾಡಿದೆ.

ಆದಿ ಉಡುಪಿ – ಮಲ್ಪೆ ಚತುಷ್ಪಥವಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಹಸಿರು ನಿಶಾನೆ – ಶಾಸಕ ರಘುಪತಿ ಭಟ್‌ ಅಭಿನಂದನೆ

ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169ಅ ಹೆದ್ದಾರಿಯ ಆದಿ ಉಡುಪಿಯಿಂದ ಮಲ್ಪೆ ವರೆಗೆ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸುವ ಯೋಜನೆಗೆ ಕೇಂದ್ರ ಹಸಿರು ನಿಶಾನೆ ತೋರಿಸಿದ್ದು, ಈ ಹೆದ್ದಾರಿ ಹಾದು ಹೋಗುವ ಪರ್ಕಳದಿಂದ ಹಿರಿಯಡ್ಕ ವರೆಗೆ ಚತುಷ್ಪಥ ಹಾಗೂ ಹಿರಿಯಡ್ಕದಿಂದ ಹೆಬ್ರಿ ವರೆಗೆ ದ್ವಿಪಥವಾಗಿ ಅಭಿವೃದ್ಧಿ ಪಡಿಸಲು ಒಟ್ಟು ರೂ. 350.00 ಕೋಟಿ ಅನುದಾನಕ್ಕೆ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಅನುಮೋದನೆ ನೀಡಲಾಗಿದೆ

ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169ಅ ಹೆದ್ದಾರಿಯ ಮಲ್ಪೆಯಿಂದ ಹೆಬ್ರಿವರೆಗೆ ಸಮಗ್ರ ಅಭಿವೃದ್ಧಿಯ ಯೋಜನಾ ವರದಿ ಸಿದ್ಧಪಡಿಸಿ ಅನುಮೋದನೆಗಾಗಿ ದಿನಾಂಕ 23-03-2021ರಂದು ಸಂಸದೆ ಶೋಭಾ ಕರಂದ್ಲಾಜೆಯವರ ನೇತೃತ್ವದಲ್ಲಿ ಶಾಸಕ ಶ್ರೀ ಕೆ ರಘುಪತಿ ಭಟ್‌ ಅವರು ಕೇಂದ್ರ ಭೂ ಸಾರಿಗೆ ಮತ್ತು ಹೆದ್ಧಾರಿ ಸಚಿವರಾದ ಶ್ರೀಯುತ ನಿತಿನ್‌ ಗಡ್ಕರಿ ಯವರನ್ನು ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಿರುತ್ತಾರೆ.

Advertisement

ಉಡುಪಿ ಜಿಲ್ಲೆಯ ಬಹು ಬೇಡಿಕೆಯಾಗಿರುವ ಈ ಪ್ರಮುಖ ಹೆದ್ದಾರಿಯ ಅಭಿವೃದ್ಧಿಯ ನಿಟ್ಟಿನಲ್ಲಿ ಮುತುವರ್ಜಿವಹಿಸಿ ಕೇಂದ್ರ ಸಚಿವರನ್ನು ಭೇಟಿ ಮಾಡಿಸಿ ಹೆದ್ದಾರಿ ಅಭಿವೃದ್ಧಿಯ ಪ್ರಾಮುಖ್ಯತೆಯ ವಸ್ತುಸ್ಥಿತಿಗಳನ್ನು ಮನವರಿಕೆ ಮಾಡಿ ನಂತರ ಯೋಜನೆಗೆ ಅನುಮೋದನೆ ದೊರಕುವವರೆಗೆ ನಿರಂತರವಾಗಿ ಪ್ರಯತ್ನಿಸಿ ಶ್ರಮವಹಿಸಿದ ಉಡುಪಿ-ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಹಾಗೂ ಯೋಜನೆಗೆ ಅನುಮೋದನೆ ನೀಡಿದ ಕೇಂದ್ರ ಭೂ ಸಾರಿಗೆ ಸಚಿವರಾದ ಶ್ರೀಯುತ ನಿತಿನ್‌ ಗಡ್ಕರಿ ಅವರಿಗೆ ಶಾಸಕ ರಘುಪತಿ ಭಟ್‌ ಅವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next