Advertisement

National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ

11:46 PM Jul 21, 2024 | Team Udayavani |

ಸಕಲೇಶಪುರ (ಹಾಸನ): ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಕರ್ತವ್ಯ ಲೋಪ, ಬೇಜವಾಬ್ದಾರಿ ಹಾಗೂ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆ ಹದಗೆಟ್ಟಿದೆ. ಈ ಸಂಬಂಧ ಕೇಂದ್ರದ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರಿಗೆ ಮಾಹಿತಿ ನೀಡಿ ವೈಜ್ಞಾನಿಕ ಕಾಮಗಾರಿ ಮಾಡುವ ಕುರಿತು ಚರ್ಚಿಸುತ್ತೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

Advertisement

ತಾಲೂಕಿನ ವಿವಿಧ ಪ್ರದೇಶಗಳಲ್ಲಿ ರವಿವಾರ ರಾ.ಹೆ. 75ರ ಅವ್ಯವಸ್ಥೆ ಪರಿಶೀಲನೆ ಅನಂತರ ಮಾತನಾಡಿ, ಭಾರೀ ಮಳೆಯಿಂದಾಗಿ ಒಂದೆಡೆ ಜಲಾಶಯಗಳು ತುಂಬಿದ್ದು, ಪಕ್ಕದ ರಾಜ್ಯಗಳ ಜತೆ ಸಂಘರ್ಷಕ್ಕೆ ಒಂದು ವರ್ಷ ವಿರಾಮ ಸಿಕ್ಕಿದೆ ಎಂದರು.

ಮಳೆಯಿಂದಾಗಿ ಮನೆ ಕಳೆದುಕೊಂಡವರಿಗೆ ಯಾವ ಸರಕಾರವೂ ಹತ್ತು ಲಕ್ಷ ಪರಿಹಾರ ನೀಡಲು ಸಾಧ್ಯವೇ ಇಲ್ಲ ಎಂಬ ಸಚಿವ ಮಂಕಾಳ ವೈದ್ಯ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ಅವರಿಗೆ ಸಮಯ ಸಿಕ್ಕಿದರೆ ಕೊಡಗಿಗೆ ಭೇಟಿ ನೀಡಲಿ. ನನ್ನ ಕಾಲದಲ್ಲಿ ಹತ್ತು ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿದ್ದೇವೆ ಎಂದು ತಿಳಿಸಿದರು.

ನಾನು, ವಿಪಕ್ಷ ನಾಯಕ ಆರ್‌.ಅಶೋಕ್‌ ಒಟ್ಟಿಗೆ ಬಂದಿದ್ದೇವೆ. ಇಲ್ಲಿ ಜಿಲ್ಲಾಡಳಿತ ಸೂಕ್ಷ್ಮವಾಗಿ ನೋಡಲು ಸ್ವಲ್ಪ ಸಹಕಾರ ಕೊಟ್ಟಿದೆ. ಶಿರೂರಿನಲ್ಲಿ ಐದು ಕಿ.ಮೀ. ಹಿಂದೆಯೇ ತಡೆಗೋಡೆ ಇಡಲಾಗಿತ್ತು. ರಾಜ್ಯದಲ್ಲಿ ಟೆರರಿಸ್ಟ್‌ ಆ್ಯಕ್ಟಿವಿಟಿಗಿಂತಲೂ ದರೋಡೆ ಚೆನ್ನಾಗಿ ನಡೆಯುತ್ತಿದೆ. ದರೋಡೆ ಹೊಡೆಯುವುದನ್ನು ನಿಲ್ಲಿಸಲು ಮಿಲಿಟರಿ ಕರೆ ತರಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆಂದು ವ್ಯಂಗ್ಯವಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next