ಮಂಗಳೂರು: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ “ರಾಷ್ಟ್ರೀಯ ಲೋಕ ಅದಾಲತ್’ ಕಾರ್ಯಕ್ರಮವನ್ನು ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
Advertisement
ಒಟ್ಟು 47 ಬೈಠಕ್‌ಗಳು ನಡೆದವು. ಒಟ್ಟು 22,135 ಪ್ರಕರಣಗಳು ಪರಿಗಣಿಸಲಾಗಿದ್ದು, ಅದರಲ್ಲಿ 13,618 ಪ್ರಕರಣಗಳು ರಾಜಿಯಲ್ಲಿ ಇತ್ಯರ್ಥವಾದವು. ರಾಜಿ ಮೊತ್ತ ಒಟ್ಟು 16,94,65,274 ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಹಾಗೂ ನ್ಯಾಯಾಧೀಶರಾದ ರವೀಂದ್ರ ಎಂ. ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜಿ. ತಿಳಿಸಿದರು.
ಉಡುಪಿ: ಉಡುಪಿಯಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ 45,975 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. ಉಡುಪಿ, ಕುಂದಾಪುರ, ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಯಿತು.
Related Articles
Advertisement