Advertisement
ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ ಶನಿವಾರ ಹೆಬ್ಬಾಳದ ಜಿಕೆವಿಕೆ ಆವರಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹಾಲು ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Related Articles
Advertisement
ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ರಾಜ್ಯದ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ರೈತರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಸಂಬಂಧ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ರಿಸರ್ವ್ ಬ್ಯಾಂಕ್ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸಿದ್ದಾರೆಂದು ಹೇಳಿದರು. ರಾಜ್ಯದಲ್ಲಿ 15 (ಹೊಸದಾಗಿ ಸೇರಿರುವುದು ಸೇರಿ)ಒಕ್ಕೂಟಗಳಿದ್ದು 26 ಲಕ್ಷ ರೈತರು ಈ ಒಕ್ಕೂಟದಲ್ಲಿದ್ದಾರೆ. ಇದರಲ್ಲಿ ಸುಮಾರು 9 ಲಕ್ಷ ಮಹಿಳೆಯರು ಕೂಡ ಹಾಲು ಒಕ್ಕೂಟದ ಸದಸ್ಯರಾಗಿದ್ದಾರೆ. ರೈತರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸರಕಾರ ಯಶಸ್ವಿನಿ ಯೋಜನೆ ಜಾರಿಗೆ ತಂದಿದ್ದು ಇದರ ಅನುಕೂಲ ಪಡೆಯುವಂತೆ ಮನವಿ ಮಾಡಿದರು. ಕೇಂದ್ರ ಪಶುಸಂಗೋಪನ ಮತ್ತು ಹೈನುಗಾರಿಕೆ ಇಲಾಖೆ ರಾಜ್ಯ ಸಚಿವ ಸಂಜೀವ್ ಕುಮಾರ್ ಬಲ್ಯಾನ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ದೇಶದ ಹೈನುಗಾರಿಕೆ ಮತ್ತು ಪಶುಸಂಗೋಪನ ಕ್ಷೇತ್ರದ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಿದೆ ಎಂದರು. ಈಗಾಗಲೇ ಕೆಎಂಫ್ ಹಾಲು ಉತ್ಪಾದನೆಯಲ್ಲಿ ದೇಶದಲ್ಲೇ 2ನೇ ಸ್ಥಾನ ಪಡೆದಿದೆ. ಕೆಎಂಎಫ್ ಉತ್ಪನ್ನಗಳಿಗೆ ಎಲ್ಲಿಲ್ಲದ ಬೇಡಿಕೆ ಇದೆ. ಆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಕೆಎಂಎಫ್ ಕೇಂದ್ರ ತೆರೆದರೆ ಎಲ್ಲ ರೀತಿಯ ಅನುಕೂಲ ಮಾಡಿಕೊಡುವ ಭರವಸೆ ನೀಡಿದರು. ಇದೇ ವೇಳೆ ಹೈನುಗಾರಿಕೆ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಷ್ಟ್ರೀಯ ಮಟ್ಟದ “ಗೋಪಾಲ್ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಂಡ್ಯದ ಅರಕೆರೆಯ ಮಿಲ್ಕ್ ಫೆಡರೇಷನ್ ಗೋಪಾಲ್ ರತ್ನ ಪ್ರಶಸ್ತಿಗೆ ಭಾಜನವಾಯಿತು. ಕೆಎಂಎಫ್ನ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ್, ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ ಒಕ್ಕೂಟದ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್, ಜಾನುವಾರು ಮತ್ತು ಹೈನುಗಾರಿಕೆ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ವರ್ಷಾ ಜೋಷಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.