Advertisement

ಆರೋಗ್ಯವಂತ ಮಗು ಸಮಾಜಕ್ಕೆ ಆಸ್ತಿ

03:06 PM Sep 09, 2020 | Suhan S |

ಬಾಗಲಕೋಟೆ: ಮಹಿಳೆಯರು ಆರೋಗ್ಯವಂತರಾಗಿದ್ದಾಗ ಮಾತ್ರ ಸಮಾಜಕ್ಕೆ ಉತ್ತಮವಾದ ಮಗುವನ್ನು ಕೊಡಲು ಸಾಧ್ಯವಾಗುತ್ತದೆ ಎಂದು ತಾಪಂ ಅಧ್ಯಕ್ಷ ಚನ್ನನಗೌಡ ಪರನಗೌಡರ ಹೇಳಿದರು.

Advertisement

ನವನಗರದ ಡಾ| ಬಿ.ಆರ್‌.ಅಂಬೇಡ್ಕರ ಭವನದಲ್ಲಿಂದು ತಾಲೂಕು ಆಡಳಿತ, ತಾಪಂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಪೋಷಣ್‌ ಮಾಸಾಚರಣೆ, ಭಾಗ್ಯಲಕ್ಷ್ಮೀ ಬಾಂಡ್‌ ವಿತರಣೆ ಹಾಗೂ ಕೋವಿಡ್‌ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರಶಂಸನಾ ಪ್ರಮಾಣ ಪತ್ರ ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹುಟ್ಟಿದ ಮಗುವಿಗೆ ತಾಯಿಯ ಹಾಲುಶ್ರೇಷ್ಠವಾಗಿದ್ದು, ಇದರಿಂದ ಮಗು ಸದೃಡವಾಗಿ ಬೆಳೆಯಲು ಸಾಧ್ಯವಾಗಿರುತ್ತದೆ. ಒಳ್ಳೆಯ ಆಹಾರಸೇವನೆ ಮಾಡುವದರಿಂದ ಆರೋಗ್ಯವಂತ ಮಗು ನೀಡಲು ಸಾಧ್ಯವಾಗುತ್ತದೆ. ಅದಕ್ಕೆ ಸರಕಾರ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೌಷ್ಟಿಕಆಹಾರ ನೀಡುವ ಯೋಜನೆ ತಂದಿದೆ. ಆದ್ದರಿಂದಇದರ ಸದುಪಯೋಗವನ್ನು ಮಹಿಳೆಯರುಪಡೆದುಕೊಳ್ಳಬೇಕೆಂದು ತಿಳಿಸಿದರು. ಅಂಗನವಾಡಿ ಕಟ್ಟಡ ದುರಸ್ತಿಗೆ ಆದ್ಯತೆ ನೀಡಲಾಗುತ್ತಿದೆ. ಬಾಗಿಲು,ಕಿಟಕಿ ದುರಸ್ತಿ ಹಾಗೂ ಶೌಚಾಲಯ ವ್ಯವಸ್ಥೆಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಮಹಿಳೆಯರಿಗೆ ಪೌಷ್ಟಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ಸರಕಾರ ಸಾಕಷ್ಟು ಖರ್ಚು ಮಾಡುತ್ತಿದೆ. ಒಳ್ಳೆಯ ನೀರು ಮತ್ತು ಆಹಾರಸೇವನೆಯಿಂದ ಆರೋಗ್ಯವಂತಾಗಿರಲುಸಾಧ್ಯವಾಗುತ್ತದೆ. ಕೊರೊನಾ ಹಿನ್ನೆಲೆಯಲ್ಲಿ ಎಲ್ಲರೂ ಬಿಸಿ ನೀರು ಕುಡಿಯುತ್ತಿದ್ದು, ಇದರ ಜತೆ ಉತ್ತಮಪೌಷ್ಟಿಕಾಂಶವುಳ್ಳ ಆಹಾರವನ್ನು ಸಹ ಸೇವಿಸಬೇಕು.ಗ್ರಾಮೀಣ ಭಾಗದಲ್ಲಿ ಹೆಣ್ಣು ಮಕ್ಕಳ ಮನೆಕೆಲಸ ಮುಗಿಸಿಕೊಂಡು ಹೊಲದ ಕೆಲಸಕ್ಕೆ ತೆರಳುತ್ತಿದ್ದರು. ಅಷ್ಟೊಂದು ಗಟ್ಟಿಮುಟ್ಟಾಗಿ ಇದ್ದರು. ಉತ್ತಮ ಆಹಾರಸೇವನೆ ಜತೆಗೆ ನಿರಂತರ ಕೆಲಸದಲ್ಲಿ ತೊಡಗಿರುತ್ತಿದ್ದರು ಎಂದರು.

ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಭಾಗ್ಯಲಕ್ಷ್ಮೀ ಯೋಜನೆ ಜಾರಿಗೆ ತಂದಿದ್ದು, ಇದು ಯಡಿಯೂರಪ್ಪನವರ ಕನಸಿನ ಯೋಜನೆಯಾಗಿತ್ತು. ಈ ಯೋಜನೆಯಿಂದ ಹೆಣ್ಣು ಮಗು ಮದುವೆಯ ವಯಸ್ಸಿಗೆ ಬಂದಾಗ ಅನುಕೂಲವಾಗಲಿದೆ. 180 ಮಕ್ಕಳಿಗೆ ಭಾಗ್ಯಲಕ್ಷ್ಮೀ ಬಾಂಡ್‌ ವಿತರಿಸಲಾಗುತ್ತಿದ್ದು, ಈ ಪೈಕಿ ಕೆಲವೊಂದು ಮಕ್ಕಳ ಬಾಂಡ್‌ಗಳನ್ನು ಸಾಂಕೇತಿಕವಾಗಿ ವಿತರಿಸಲಾಗುತ್ತಿದೆ. ನಂತರ ಅವರಿಗೆ ಬಾಂಡ್‌ ತಲುಪಿಸುವ ಕಾರ್ಯ ಅಧಿಕಾರಿಗಳು ಮಾಡಲಿದ್ದಾರೆ ಎಂದು ತಿಳಿಸಿದರು.

Advertisement

ಇದೇ ಸಂದರ್ಭದಲ್ಲಿ ಕೋವಿಡ್ ವೇಳೆ ಶ್ರಮಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರಶಂಸನಾ ಪತ್ರಹಾಗೂ ಭಾಗ್ಯಲಕ್ಷ್ಮೀ ಬಾಂಡ್‌ ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಿ.ಸಿ. ಶಿವಲಿಂಗಪ್ಪ ಪ್ರಾಸ್ತಾವಿಕವಾಗಿಮಾತನಾಡಿದರು. ತಹಶೀಲ್ದಾರ್‌ ಗುರುಸಿದ್ದಯ್ಯ ಹಿರೇಮಠ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್‌.ವೈ. ಬಸರಿಗಿಡದಸೇರಿದಂತೆ ಇತರರು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಐಸಿಡಿಸಿ ವಿಭಾಗದ ಅಧೀಕ್ಷಕಿ ಜಯಮಾಲಾ ದೊಡಮನಿ ಸ್ವಾಗತಿಸಿದರು.

ಅಂಗನವಾಡಿ ಮೇಲ್ವಿಚಾರಕಿ ಸುರೇಖಾ ಅಂಬಳಗಿ ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ ಭವನದ ಆವರಣದಲ್ಲಿ ಶಾಸಕ ವೀರಣ್ಣ ಚರಂತಿಮಠ ಸಸಿ ನೆಟ್ಟು ನೀರುಣಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next