Advertisement

ರಾ.ಹೆ. ಸಮಸ್ಯೆ ಬಗೆಹರಿಸಲು ಗಡುವು: ಜಿಲ್ಲಾಧಿಕಾರಿ ಕೂರ್ಮಾ ರಾವ್‌ ನಿರ್ದೇಶನ

02:48 AM Jul 09, 2022 | Team Udayavani |

ಉಡುಪಿ: ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66, 169, 169ಎ ಗಳಲ್ಲಿ ವಾಹನ ಸುಗಮ ಸಂಚಾರಕ್ಕೆ ಅಡಚಣೆ ಯಾಗುತ್ತಿರುವ ಎಲ್ಲ ಸಮಸ್ಯೆಗಳನ್ನು 10 ದಿನಗಳ ಒಳಗೆ ಸಂಪೂರ್ಣವಾಗಿ ಬಗೆಹರಿಸಿ, ಈ ಕುರಿತು ಪೂರ್ಣ ವರದಿಯನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಅವರು ಶುಕ್ರವಾರ ತಮ್ಮ ಕಚೇರಿ ಯಲ್ಲಿ ನಡೆದ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement

ಜಿಲ್ಲಾಡಳಿತ ಸೂಚಿಸುವ ಸಭೆ ಗಳಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಸಭೆಗೂ ರಾ.ಹೆ. ಪ್ರಾಧಿ ಕಾರದ ಅಧಿಕಾರಿಗಳು ಗೈರು ಹಾಜರಾ ಗುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ರಾ.ಹೆ.ಯಲ್ಲಿ ಸುಗಮವಾಗಿ ಟೋಲ್‌ ಸಂಗ್ರಹ ಮಾಡಲು ಮತ್ತು ಇತರ ಕಾರ್ಯ ಗಳನ್ನು ಮಾಡಲು ಜಿಲ್ಲಾಡಳಿತದ ನೆರವು ಬೇಕಿದ್ದಲ್ಲಿ, ಜಿಲ್ಲಾಡಳಿತ ನೀಡುವ ಎಲ್ಲ ಆದೇಶಗಳನ್ನು ಪಾಲಿಸಬೇಕು ಮತ್ತು ಪ್ರಸ್ತುತ ರಾ.ಹೆ.ಯಲ್ಲಿ ಕಂಡುಬರುತ್ತಿರುವ ಎಲ್ಲ ಸಮಸ್ಯೆ ಗಳನ್ನು 10 ದಿನದ ಒಳಗೆ ಸಂಪೂರ್ಣ ವಾಗಿ ಬಗೆಹರಿಸಿ, ಸರಿಪಡಿಸಿದ ದಿನಾಂಕ ಮತ್ತು ಸಮಯವನ್ನು ಒಳಗೊಂಡ ಕುರಿತು ಛಾಯಾಚಿತ್ರಗಳು ಹಾಗೂ ವರದಿಯನ್ನು ಸಲ್ಲಿಸಿ, ಮುಂದಿನ ಸಭೆಗೆ ಹಾಗೂ ಜಿಲ್ಲಾಡಳಿತ ಸೂಚಿಸುವ ಎಲ್ಲ ಸಭೆಗಳಿಗೆ ಕಡ್ಡಾಯವಾಗಿ ಹಾಜರಿರುವಂತೆ ಎಚ್ಚರಿಕೆ ನೀಡಿದರು.

ಕುಂದಾಪುರದ ಸಂಗಮ್‌ ಜಂಕ್ಷನ್‌ನಲ್ಲಿ ಚರಂಡಿ ವ್ಯವಸ್ಥೆ ಕಲ್ಪಿಸಿ ನೀರು ಹರಿಯಲು ವ್ಯವಸ್ಥೆ ಹಾಗೂ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಬೀದಿದೀಪದ ವ್ಯವಸ್ಥೆ ಮಾಡಬೇಕು. ಸಾಲಿಗ್ರಾಮ ಬಳಿಯ ಸರ್ವಿಸ್‌ ರಸ್ತೆ ಕಾಮಗಾರಿ ಸೇರಿದಂತೆ ಬಾಕಿ ಇರುವ ಎಲ್ಲ ಅಪೂರ್ಣ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು ಎಂದು ಸೂಚಿಸಿದರು.

ಬೀದಿ ದೀಪ ಅಳವಡಿಸಿ
ರಾಷ್ಟ್ರೀಯ ಹೆದ್ದಾರಿಗಳ ಪಕ್ಕದ ಚರಂಡಿಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ತೊಂದರೆ ಇರುವ ಅಡೆತಡೆಗಳನ್ನು ತತ್‌ಕ್ಷಣವೇ ಸರಿಪಡಿಸಬೇಕು. ತುರ್ತು ಅಗತ್ಯ ಇರುವ ಕಡೆಗಳಲ್ಲಿ ತತ್‌ಕ್ಷಣವೇ ಬೀದಿದೀಪ ಅಳವಡಿಸ ಬೇಕು. ಹೆದ್ದಾರಿ ಪಕ್ಕದಲ್ಲಿ ನೀರು ಹರಿಸಲು ಮತ್ತು ಸಂಚಾರಕ್ಕೆ ತಡೆ ಉಂಟು ಮಾಡುವ ಗಿಡಗಳನ್ನು ಕೂಡಲೇ ತೆರವುಗೊಳಿಸಬೇಕು, ಮೇಲ್ಸೇತುವೆಗಳ ಮೇಲೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

Advertisement

ಕೇಸ್‌ ದಾಖಲಿಸಿ
ಹೆದ್ದಾರಿಯಲ್ಲಿ ನಡೆದಿರುವ ಅವೈಜ್ಞಾನಿಕ ಕಾಮಗಾರಿಯಿಂದ ಅಪಘಾತ ಸಂಭವಿಸಿ ಪ್ರಾಣ ಹಾನಿ ಯಾದಾಗ ಸಂಬಂಧಪಟ್ಟ ಹೆದ್ದಾರಿ ಇಲಾಖೆಯ ಅಧಿಕಾರಿಗಳ ಮೇಲೆ ಕೇಸು ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ನಿರ್ದೇಶಿಸಿದರು.

ವೇತನ ತಡೆಗೆ ಸೂಚನೆ
ಹೆದ್ದಾರಿಯ ಸಮಸ್ಯೆಗಳ ಬಗ್ಗೆ ಜಿಲ್ಲಾಡಳಿತ ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳನ್ನು ದಾಖಲಿಸಿ ಅವುಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸಬೇಕು. ಇದಕ್ಕಾಗಿ ದೂರು ನಿರ್ವಹಣೆ ವ್ಯವಸ್ಥೆಯನ್ನು ಅಳವಡಿಸಿಕೊಂಡು ಅದರಲ್ಲಿ ದೂರಿಗೆ ಸಂಬಂಧಿಸಿದ ಎಲ್ಲ ವಿವರಗಳನ್ನು ದಾಖಲಿಸಬೇಕು. ನಿಗದಿತ ಅವಧಿಯೊಳಗೆ ಸಮಸ್ಯೆಗಳನ್ನು ಬಗೆಹರಿಸದ ಸಿಬಂದಿಯ ವೇತನ ಮತ್ತು ಭತ್ತೆ ತಡೆ ಹಿಡಿಯುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ಎಎಸ್ಪಿ ಸಿದ್ದಲಿಂಗಪ್ಪ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ರಾ.ಹೆ. ಪ್ರಾಧಿಕಾರ (ಮಂಗಳೂರು) ಯೋಜನ ನಿರ್ದೇಶಕ ಲಿಂಗೇಗೌಡ, ನವಯುಗ ಮತ್ತು ಐಆರ್‌ಬಿ ಎಂಜನಿ ಯರ್‌ಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next