Advertisement

ರಾಷ್ಟ್ರೀಯ ಸೇವಾ ಭಾರತಿ ಕಾರ್ಯಾಗಾರ

11:51 AM Jun 03, 2017 | Team Udayavani |

ಬೆಳ್ತಂಗಡಿ: ಗ್ರಾಮೀಣ ಜನರ ಆವಶ್ಯಕತೆಗಳಿಗೆ ಅನುಗುಣವಾಗಿ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಇದರಿಂದ ಸರ್ವಾಂಗೀಣ ಗ್ರಾಮೀಣಾಭಿವೃದ್ಧಿ ಜೊತೆ ಜನತೆಗೆ ತಮ್ಮ ಸುಂದರ, ಸುಸ್ಥಿರ ಬದುಕು ಕಟ್ಟಿಕೊಳ್ಳಲು ಆಗುತ್ತಿದೆ ಎಂದು ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

Advertisement

ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವೈಭವ ಶ್ರೀ ಕಾರ್ಯಶಾಲಾ ಕಾರ್ಯಕ್ರಮದಡಿ, ಹೊಸದಿಲ್ಲಿಯ ರಾಷ್ಟ್ರೀಯ ಸೇವಾ ಭಾರತಿ ಸಂಸ್ಥೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭ ಕ್ಷೇತ್ರದ ಚತುರ್ದಾನ ಪರಂಪರೆ ಹಾಗೂ ಕ್ಷೇತ್ರದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ನಿರುದ್ಯೋಗ ಸಮಸ್ಯೆ ನಿವಾರಿಸಲು ಪ್ರಾರಂಭಿಸಿದ ರುಡ್‌ಸೆಟ್‌ ಸಂಸ್ಥೆ ಸ್ವ-ಉದ್ಯೋಗ ತರಬೇತಿ ನೀಡುವ ಮೂಲಕ ಲಕ್ಷಾಂತರ ನಿರುದ್ಯೋಗಿಗಳ ಪಾಲಿಗೆ ವರವಾಗಿದೆ ಎಂದು ಅವರು ಹೇಳಿದರು. 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿ ರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌, ಜನತೆ ಜೊತೆಗೆ ಕೆಲಸ ಮಾಡುವಾಗ ಅವರ ಕಷ್ಟ ಸುಖಗಳಿಗೆ ಸ್ಪಂದಿಸಿ, ಸಮಸ್ಯೆ ಬಗೆಹರಿಸಿದಾಗ ಮಾತ್ರ ಯಶಗಳಿಸಲು ಸಾಧ್ಯ. ಜನತೆಗೆ ಅಭಿವೃದ್ಧಿ ಕಾರ್ಯಕ್ರಮ ಕೈಗೊಳ್ಳುವ ಸಂದರ್ಭ ಅವರ ಸುಸ್ಥಿರತೆ ಜೊತೆಗೆ ಕಾರ್ಯಕ್ರಮ ಸುಸ್ಥಿರವಾದಲ್ಲಿ ಹೆಚ್ಚೆಚ್ಚು ಜನರನ್ನು ನಾವು ತಲುಪಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಭಾರತಿ ಸಂಸ್ಥೆಯ ರಾಷ್ಟ್ರೀಯ ಪ್ರಧಾನ ಸಂಘಟನ ಕಾರ್ಯದರ್ಶಿ ಗುರುಶರಣ್‌ ಪ್ರಸಾದ್‌, ರಾಷ್ಟ್ರೀಯ ಜಂಟಿ ಸಂಘಟನ ಕಾರ್ಯದರ್ಶಿ ರಾಕೇಶ್‌ ಜೈನ್‌, ರಾಷ್ಟ್ರೀಯ ಸಂಯೋಜಕ ಸುಂದರ್‌ ಲಕ್ಷ್ಮಣ್‌, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಣಕಾಸು ನಿರ್ದೇಶಕ ಶಾಂತಾರಾಮ್‌ ಪೈ ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಈ ಕಾರ್ಯಾಗಾರ ನಡೆಸಲಾಗಿದ್ದು, ವಿವಿಧ ರಾಜ್ಯಗಳ ಸುಮಾರು 35 ರಾಷ್ಟ್ರೀಯ ಪ್ರಮುಖರು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

Advertisement

ಮೂರು ದಿನಗಳ ಕಾರ್ಯಕ್ರಮ ದಲ್ಲಿ ಯೋಜನೆಯ ಸಾಮಾಜಿಕ, ಆರ್ಥಿಕ ಹಾಗೂ ಅಭಿವೃದ್ಧಿ ಕಾರ್ಯ ಕ್ರಮ, ಸ್ವ-ಸಹಾಯ ಸಂಘ, ಪ್ರಗತಿ ಬಂಧು ತಂಡಗಳ ಮಾದರಿ, ಸಿರಿ ಗ್ರಾಮೋದ್ಯೋಗ ಸಂಸ್ಥೆಯನ್ನು ಅಧ್ಯಯನ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next