Advertisement
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ದೇಶದಲ್ಲಿ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಸಂದಿದ್ದು, ಸಂವಿಧಾನ ನಮಗೇನು ಕೊಟ್ಟಿದೆ ಎಂಬುದನ್ನು ಪ್ರತಿಯೊಬ್ಬರೂ ಅರಿಯಬೇಕು. ಶಿಕ್ಷಣ, ಸಂಘಟನೆ, ಹೋರಾಟ ಎಂಬ ಡಾ| ಬಿ.ಆರ್. ಅಂಬೇಡ್ಕರ್ ಅವರ ಮೂರು ಮಂತ್ರಗಳನ್ನು ನೆನಪಿಟ್ಟುಕೊಳ್ಳಬೇಕು. ಅದರಲ್ಲಿ ನಮಗೆ ಹಕ್ಕುಗಳನ್ನು ಕೊಟ್ಟಿರುವಂತೆಯೇ ಕರ್ತವ್ಯಗಳನ್ನೂ ಕೊಟ್ಟಿದೆ. ಇದು ಎಲ್ಲರಿಗೂ ಗೊತ್ತಾಗಬೇಕು ಎಂದರು.
ಈ ಎಲ್ಲ ಕಾರಣಗಳಿಂದಲೇ ಗಣರಾಜ್ಯೋತ್ಸವ ದಿನವಾದ ಜ.26ರಿಂದ ರಾಜ್ಯಾದ್ಯಂತ ಆರಂಭವಾಗಿರುವ ಸಂವಿಧಾನ ಜಾಥಾ ಯಶಸ್ವಿಯಾಗಿ ನಡೆಯುತ್ತಿದ್ದು, 2024-25ನೇ ಸಾಲಿನ ಬಜೆಟ್ ಪುಸ್ತಕದ ಮುಖಪುಟದಲ್ಲಿಯೂ ಸಂವಿಧಾನದ ಪೀಠಿಕೆಯನ್ನು ಪ್ರಕಟಿಸಿದ್ದೇವೆ. ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದಿಸಲಾಗುತ್ತಿದೆ. ಸಂವಿಧಾನ ಜಾಥಾವು ಫೆ.23ರಂದು ಕೊನೆಗೊಳ್ಳಲಿದೆ. ಇದರ ಅಂಗವಾಗಿ ಎರಡು ದಿನಗಳ ಕಾಲ ರಾಷ್ಟ್ರೀಯ ಮಟ್ಟದ ಏಕತಾ ಸಮಾವೇಶವನ್ನೂ ನಡೆಸಲಾಗುತ್ತಿದೆ. ಸಮಾಜ ಕಲ್ಯಾಣ ಸಚಿವ ಡಾ| ಎಚ್.ಸಿ. ಮಹದೇವಪ್ಪ ಸಹಿತ ಇಲಾಖೆಯ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.