ಬೆಂಗಳೂರು: ಚುನಾವಣೆ ಮತ್ತು ಮತ ದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗಿಯಾಗುವ ಮೂಲಕ ಯುವಕರು ದೇಶದ ನಾಯಕತ್ವದ ಆಯ್ಕೆಯಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಬೇಕು ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಹೇಳಿದರು.
ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಮಂಗಳವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ರಾಜ್ಯಪಾಲರು ಮಾತನಾಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಉತ್ತಮ ಕೆಲಸ ಮಾಡಿದ ಅಧಿಕಾರಿಗಳು, ಮತದಾರರ ಜಾಗೃತಿ ಕುರಿತು ಹಮ್ಮಿಕೊಳ್ಳಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಇದನ್ನೂ ಓದಿ:ಸಿದ್ದು, ಡಿಕೆಶಿಯೇ ಬಿಜೆಪಿಗೆ ಬಂದರೂ ಅಚ್ಚರಿ ಇಲ್ಲ: ರೇಣು
ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಜಂಟಿ ಮುಖ್ಯ ಚುನಾವಣಾಧಿಕಾರಿ ಡಿ. ಶಂಭು ಭಟ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತಾ ಸೇರಿದಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಭಾಗವಹಿಸಿದ್ದರು.