Advertisement

ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮುಖ್ಯವಾಗಿದೆ: ಕಿರಣಕುಮಾರ ವಡಗೇರಿ

07:24 PM Jan 25, 2022 | Team Udayavani |

ರಬಕವಿ-ಬನಹಟ್ಟಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ಪವಿತ್ರವಾದ ಕಾರ್ಯವಾಗಿದೆ. ಆದ್ದರಿಂದ ಮತದಾನದ ಅಧಿಕಾರ ಪಡೆದ ಯುವಕರು ದೇಶದ ಸ್ವಾಭಿಮಾನ ಮತ್ತು ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಬನಹಟ್ಟಿಯ ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ಕಿರಣಕುಮಾರ ವಡಗೇರಿ ತಿಳಿಸಿದರು.

Advertisement

ಅವರು ಬನಹಟ್ಟಿ ಎಸ್‌ಟಿಸಿ ಕಾಲೇಜು, ತಾಲ್ಲೂಕು ಆಡಳಿತ ಹಾಗೂ ನ್ಯಾಯಾಂಗ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಸ್ಥಳೀಯ ತಹಶೀಲ್ದಾರ್ ಸಂಜಯ ಇಂಗಳೆ ಮಾತನಾಡಿ, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ವ್ಯಕ್ತಿ ಮತದಾನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಯುವಕರ ಕೊಡುಗೆ ಅಪಾರವಾಗಿದೆ. ಪ್ರಜೆಗಳು ಮತದಾನದ ಸಂದರ್ಭದಲ್ಲಿ ಯಾವುದೆ ಆಸೆ ಆಮೀಷಗಳಿಗೆ ಒಳಗಾಗದೆ ನಿರ್ಭಯವಾಗಿ ಮತದಾನದಲ್ಲಿ ಭಾಗವಹಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ಉಪನ್ಯಾಸಕ ಡಾ.ಮನೋಹರ ಶಿರಹಟ್ಟಿ ಮತದಾನದ ಮಹತ್ವ ಕುರಿತು ಉಪನ್ಯಾಸ ನೀಡಿ, ಪ್ರಮಾಣ ವಚನ ಬೋಧನೆ ಮಾಡಿದರು. ಡಾ.ಜಿ.ಆರ್.ಜುನ್ನಾಯ್ಕರ್ ಮಾತನಾಡಿದರು.

ಜನತಾ ಶಿಕ್ಷಣ ಸಂಘದ ಅಧ್ಯಕ್ಷ ಸುಭಾಸಚಂದ್ರ ಭದ್ರನವರ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯ ಮೇಲೆ ಗಂಗಾಧರ ಕೊಕಟನೂರ, ಅಶೋಕ ಕಾಡದೇವರ, ಪ್ರಾಚಾರ್ಯ ಶಂಕರ ಅರಬಳ್ಳಿ, ಡಾ.ಮಂಜುನಾಥ ಬೆನ್ನೂರ, ಡಾ.ರೇಶ್ಮಾ ಗಜಾಕೋಶ, ವೈ.ಬಿ.ಕೊರಡೂರ, ವಕೀಲರಾದ ರಾಜಕುಮಾರ ಗೂಗಾಡ, ಮುಕಂದ ಕೋಪರ್ಡೆ, ಗಿರೀಶ ಬೊಳಗೊಂಡ ಇದ್ದರು.

Advertisement

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಚುನಾವಣಾ ಆಯೋಗವು ನೀಡಿದ ಗುರುತಿನ ಚೀಟಿಗಳನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಉಪ ತಹಶೀಲ್ದಾರ್ ಎಸ್.ಎಲ್.ಕಾಗಿ, ಕಂದಾಯ ನಿರೀಕ್ಷಕ ಪ್ರಕಾಶ ಮಠಪತಿ, ಶಿಕ್ಷಣ ಇಲಾಖೆಯ ಅಧಿಕಾರಿ ಶ್ರೀಶೈಲ ಬುರ್ಲಿ, ಡಾ.ಪ್ರಕಾಶ ಕಂಗನಾಳೆ, ಗುರುನಾಥ ಪಾಟೀಲ ಸೇರಿದಂತೆ ಅನೇಕರು ಇದ್ದರು.

ಮಧು ಗುರುವ ಪ್ರಾರ್ಥಿಸಿದರು. ವಿಶ್ವಜ ಕಾಡದೇವರ ಸ್ವಾಗತಿಸಿದರು. ಕನ್ಯಾಕುಮಾರಿ ಹೂಗಾರ ನಿರೂಪಿಸಿದರು. ಸುರೇಶ ನಡೋಣಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next