ರಾಷ್ಟ್ರೀಯ ಮಹಿಳಾ ಪಕ್ಷ ಇದೀಗ ಕರ್ನಾಟಕದಲ್ಲೂ ತನ್ನ ಕಾರ್ಯವ್ಯಾಪ್ತಿ ವಿಸ್ತರಣೆ ಮಾಡಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಡಾ.ಶ್ವೇತಾ ಶೆಟ್ಟಿ ತಿಳಿಸಿದರು.
Advertisement
ಪ್ರಸ್ ಕ್ಲಬ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಹಿಳಾ ಪಕ್ಷದ ರಾಜ್ಯ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಡಾ.ಶ್ವೇತಾ ಶೆಟ್ಟಿ, ದೆಹಲಿಯಲ್ಲಿ ಪಕ್ಷ ಕಳೆದ ತಿಂಗಳು ಅಸ್ಥಿತ್ವಕ್ಕೆ ಬಂದಿದ್ದು, ಇದೀಗ ಸಂಘಟನೆಯ ಜಾಲವನ್ನು ರಾಜ್ಯದಾದ್ಯಂತ ವಿಸ್ತರಿಸಲು ತೀರ್ಮಾನಿಸಲಾಗಿದೆ. ಈ ಪಕ್ಷದಲ್ಲಿ ಮಹಿಳೆಯರಿಗೆ ಮಾತ್ರ ಸದಸ್ಯತ್ವ ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಲಾಗುತ್ತದೆ. ಪಕ್ಷದ ತಣ್ತೀ ಸಿದಾಟಛಿಂತ ವನ್ನು ಬೆಂಬಲಿಸುವ ಪುರುಷರನ್ನೂ ಸಹ ಪಕ್ಷಕ್ಕೆ ಸ್ವಾಗತಿಸಲಾಗುವುದು ಎಂದು ಹೇಳಿದರು.