Advertisement

ಮುಂದಿನ ಬಾರಿ ರಾಷ್ಟ್ರವಾದಿ ಮುಖ್ಯಮಂತ್ರಿ; ಆಗ ಜಾತಿ ಲೆಕ್ಕಾಚಾರವಿಲ್ಲ: ಈಶ್ವರಪ್ಪ ಅಸಮಾಧಾನ

09:26 AM Aug 05, 2021 | Team Udayavani |

ಮೈಸೂರು: ಮುಂದಿನ ಬಾರಿ ರಾಷ್ಟ್ರವಾದಿ ಮುಖ್ಯಮಂತ್ರಿಯಾಗುತ್ತಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಬೇಕೆಂದು ಬೆಂಬಲಿಗರು ಬಯಸಿದ್ದರು. ಆದರೆ ಸಚಿವನೂ ಆಗುವುದಿಲ್ಲಎಂಬಂತೆ ಬಿಂಬಿಸಲಾಗಿತ್ತು. ಹೈಕಮಾಂಡ್ ನನ್ನನ್ನು ಹೇಗೆ ಪರಿಗಣಿಸಿದೆ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ ಎಂದರು.

ಮುಂದೆ ಜಾತಿ ಲೆಕ್ಕಾಚಾರವಿಲ್ಲ: ಈವರೆಗೆ ಬಿಜೆಪಿಗೆ ಸಂಪೂರ್ಣ ಬಹುಮತ ಬಂದಿಲ್ಲ. ಹೊರಗಿನವರ ಸಹಕಾರ ಪಡೆದುಕೊಂಡು ಸರ್ಕಾರ ರಚನೆ ಮಾಡಿದ್ದೇವೆ. ಮುಂದಿನ ಬಾರಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಗುತ್ತೆ. ಆಗ ಜಾತಿ ವಿಚಾರ ಬರುವುದಿಲ್ಲ. ರಾಷ್ಟ್ರವಾದಿಯನ್ನು ಬಿಜೆಪಿ ಮುಖ್ಯಮಂತ್ರಿ ಮಾಡುತ್ತದೆ ಎಂದು ಈಶ್ವರಪ್ಪ ಹೇಳಿದರು.

ಬೊಮ್ಮಾಯಿ ಬೆಟ್ಟ ಅಗೆದು ಇಲಿ ಹಿಡಿದಿದ್ದಾರೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಈಶ್ವರಪ್ಪ, ಸಿದ್ದರಾಮಯ್ಯ ಹಸಿವಿನಿಂದ ಒದ್ದಾಡುತ್ತಿರುವ ಇಲಿ. ಸಿದ್ದರಾಮಯ್ಯ ಹುಲಿಯಾಗುತ್ತಾರೆ ಅಂದುಕೊಂಡಿದ್ದೆವು. ಆದರೆ ಅವರು ಇಲಿಯಾಗಿ ವಿಲವಿಲ‌ ಒದ್ದಾಡುತ್ತಿದ್ದಾರೆ. ಅವರು ರಾಜ್ಯಕ್ಕೆ ಹುಲಿಯಾಗುವ ಬದಲು ಡಿ.ಕೆ.ಶಿವಕುಮಾರ್ ಮೇಲೆ ಹುಲಿಯಾಗಿದ್ದಾರೆ ಎಂದು ಲೇವಡಿ ಮಾಡಿದರು.

ಇದನ್ನೂ ಓದಿ:ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಗೆ ಬೆಳ್ಳಂಬೆಳಗ್ಗೆ ಐಟಿ ಶಾಕ್!

Advertisement

ಚಾಮುಂಡಿ ಬೆಟ್ಟದಲ್ಲಿ ನಿಂತು ಹೇಳುತ್ತಿದ್ದೇನೆ. ಪರಮೇಶ್ವರ್ ಅವರನ್ನು ಸೋಲಿಸಿದ್ದು ಸಿದ್ದರಾಮಯ್ಯ. ತಮ್ಮ ಸಿಎಂ ಸ್ಥಾನಕ್ಕೆ ಅಡ್ಡಿಯಾಗುತ್ತಾರೆ ಎಂದು ಸೋಲಿಸಿದರು. ಸಿದ್ದರಾಮಯ್ಯ ಒಬ್ಬ ಕುರುಬರನ್ನು ಬೆಳೆಸಲಿಲ್ಲ. ನೆಪ ಮಾತ್ರಕ್ಕೆ ತಾತ್ಕಾಲಿಕವಾಗಿ ಕೆಲವು ಕುರುಬರನ್ನು ಸಚಿವರನ್ನಾಗಿ ಮಾಡಿದ್ದರು. ಪೂರ್ಣಾವಧಿಯಲ್ಲಿ ಯಾರಿಗೂ ಸಚಿವ ಸ್ಥಾನ ನೀಡಲಿಲ್ಲ ಎಂದು ಕಿಡಿಕಾರಿದರು.

ನಮ್ಮಲ್ಲಿ ಹಿಂದುಳಿದವರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ಪಕ್ಷ ನಿಷ್ಠ ಕಾರ್ಯಕರ್ತರೊಂದಿಗೆ ಅಧಿಕಾರಕ್ಕೆ ಬರಲಿದೆ. ಇದುವರೆಗೂ ಯಾವತ್ತು ಬಿಜೆಪಿ ಪೂರ್ಣಪ್ರಮಾಣದಲ್ಲಿ ಅಧಿಕಾರ ನಡೆಸಿಲ್ಲ. ಇದರಿಂದಾಗಿಯೇ ಸಣ್ಣ ಪುಟ್ಟ ಗೊಂದಲಗಳಿದ್ದವು. ಮುಂದೆ ಈ ರೀತಿ ಆಗುವುದಿಲ್ಲ ಎಂದು ಸಚಿವ ಈಶ್ವರಪ್ಪ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next