Advertisement

ಪ್ರಕೃತಿ ವಿಕೋಪಕ್ಕೆ ಜ್ಞಾನ-ತಂತ್ರಜ್ಞಾನದ ಪರಿಹಾರ ಅಗತ್ಯ

12:09 PM Aug 31, 2018 | Team Udayavani |

ಬೆಂಗಳೂರು: ಕೇರಳ, ಕೊಡಗು, ಚೆನ್ನೈನಲ್ಲಿ ಸಂಭವಿಸುತ್ತಿರುವ ಪ್ರಕೃತಿ ವಿಕೋಪದಿಂದ ಮನುಕುಲ ತತ್ತರಿಸಿ ಹೋಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದರೆ ಜಜ್ಞಾನ ಮತ್ತು ತಂತ್ರಜ್ಞಾನದ ಪರಿಹಾರ ಅಗತ್ಯ ಎಂಬ ಅಭಿಪ್ರಾಯವನ್ನು ಚೆನ್ನೈನ ಅಣ್ಣಾ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಎಂ.ಕೆ. ಸೂರಪ್ಪ ಅವರು ವ್ಯಕ್ತಪಡಿಸಿದರು.

Advertisement

ಅವರು ನಗರದ ರಾಮಯ್ಯ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (ಆರ್‌ಐಟಿ)  ಆವರಣದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ‌ರು. ಇತ್ತೀಚಿನ ದಿನಗಳಲ್ಲಿ ಆರೋಗ್ಯ, ಶಿಕ್ಷಣದಲ್ಲಿ ದೇಶ ಹಿಂದುಳಿದಿದ್ದು, ಇದರ ಗಮನ ಹರಿಸಬೇಕಾಗಿದೆ.

ಅಮೆರಿಕ, ಚೀನಾ, ಜಪಾನ್‌ ರಾಷ್ಟಗಳು ತಂತ್ರಜ್ಞಾನದಲ್ಲಿ ಅಭಿವೃದ್ಧಿ ಹೊಂದಿದ್ದು, ಭಾರತ ದೇಶವೂ ತಂತ್ರಜಾnನದಲ್ಲಿ ಮುಂದುವರಿದೆ. ಆದರೂ ವಿದ್ಯಾರ್ಥಿಗಳು ಹೆಚ್ಚು ಆವಿಷ್ಕಾರಗಳತ್ತ ಗಮನ ಹರಿಸಬೇಕಾಗಿದೆ. ಆ ಮೂಲಕ ಪ್ರಕೃತಿ ವಿಕೋಪಕ್ಕೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಬೇಕಾಗಿದ್ದು, ಹೆಚ್ಚಿನ ಸಂಶೋಧನೆ ನಡೆಯುಬೇಕಿದೆ. 

ಆರ್‌ಐಟಿ ಹಲವು ತಂತ್ರಜ್ಞಾನದ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದು, ಹೊಸ ಹೊಸ ಆವಿಷ್ಕಾರಗಳಿಗೆ ಇನ್ನಷ್ಟು ಪ್ರಾಮುಖ್ಯತೆ ನೀಡುತ್ತಿದೆ. ಅಲ್ಲದೆ, ದೇಶದ ಅಭಿವೃದ್ಧಿಗೆ ಜ್ಞಾನ-ತಂತ್ರಜ್ಞಾನ ಹಾಗೂ ಆರ್ಥಿಕಾಭಿವೃದ್ಧಿಗೆ ಆವಿಷ್ಕಾರ ಪ್ರಮುಖ ಅಸ್ತ್ರವಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next