Advertisement
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ವಿಶ್ವ ಭೂಮಿ ದಿನಾಚರಣೆ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ತಾಲೂಕು ಆಡಳಿತ, ತಾಪಂ ಹಾಗೂ ಅರಣ್ಯ ಇಲಾಖೆ, ಸಾಮಾಜಿ ಅರಣ್ಯ ವಿಭಾಗ ಮತ್ತು ಪ್ರಾದೇಶಿಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಆಯೋಜಿಸಲಾಗಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ತಾಪಂ ಇಒ ಕೆ.ಪಿ.ಸಂಜೀವಪ್ಪ ಮಾತನಾಡಿ, ಭೂಮಿ ಮನುಷ್ಯನ ಜೀವನಕ್ಕೆ ಅಡಿಪಾಯ ಇದ್ದಹಾಗೆ. ಭೂಮಿ ಇಲ್ಲದೇ ನಾವು ಏನು ಮಾಡಲು ಸಾಧ್ಯವಿಲ್ಲ. ಆದರೆ ಇಂದು ಭೂಮಿ ಕೂಡ ಕಲುಷಿತವಾಗಿದೆ. ಇರುವ ಭೂಮಿ ಕೂಡ ಕಣ್ಮರೆಯಾಗಿ ಎಲ್ಲೆಡೆ ಕಟ್ಟಡಗಳು ತಲೆ ಎತ್ತುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಬದುಕುವುದು ಕಷ್ಟ: ಜಿಲ್ಲಾ ಪ್ರಾದೇಶಿಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಮಧುಸೂಧನ್ ಮಾತನಾಡಿ, ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲೆ ಇದೆ. ಮಾನವ ಅತಿಯಾಸೆಯಿಂದ ಔಷಧಿಯ ಸಸ್ಯ ಸೇರಿದಂತೆ ಮಹತ್ವದ ಮರ, ಬಳ್ಳಿಗಳು, ಪ್ರಾಣಿ, ಪಕ್ಷಿ ಸಂಕುಲಗಳನ್ನು ನಾವು ಇಂದು ಕಳೆದುಕೊಂಡಿದ್ದೇವೆ. ಪರಿಸರ ಅಸಮತೋಲ ಆದರೆ ಮನುಷ್ಯನಿಗೆ ಬದುಕುವುದು ಕಷ್ಟವಾಗಲಿದೆ. ಆದ್ದರಿಂದ ಪ್ರತಿಯೊಬ್ಬರು ಪರಿಸರದ ಬಗ್ಗೆ ಕಾಳಜಿ ವಹಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಲ್.ನಾರಾಯಣಸ್ವಾಮಿ ಮಾತನಾಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ದೇವರಾಜ್, ವಕೀಲರ ಸಂಘದ ಅಧ್ಯಕ್ಷ ಕೆ.ಎಚ್.ತಮ್ಮೇಗೌಡ, ತಹಶೀಲ್ದಾರ್ ಕೆ.ನರಸಿಂಹಮೂರ್ತಿ, ಅರಣ್ಯಾಧಿಕಾರಿ ಪೂರ್ವಿಕ ರಾಣಿ, ಕಾಲೇಜಿನ ಎನ್‌ಎಸ್‌ಎಸ್ ಘಟಕದ ಅಧಿಕಾರಿಗಳಾದ ರಂಗಸ್ವಾಮಿ, ಸಿ.ಕಲ್ಯಾಣರಾಜು ಉಪಸ್ಥಿತರಿದ್ದರು.
ಭೂ ಅತಿಕ್ರಮಣದಿಂದ ಭೂಮಿಯ ಮೇಲಿನ ಜೀವರಾಶಿಗಳು ಶಾಶ್ವತವಾಗಿ ನಾಶ ಹೊಂದುವ ಹೊಸ್ತಿಲಲ್ಲಿವೆ. ಮಾನವನು ಪ್ರಕೃತಿಯಿಂದ ಬೇಕಾದ ಸೇವೆ ಪಡೆದರೂ ದುರಾಸೆಯಿಂದಾಗಿ ಪ್ರಕೃತಿ ನಾಶಪಡಿಸುತ್ತಿದ್ದನೆ. ಪರಿಸರ ಸಮತೋಲನ ಕಾಪಾಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಮುಂದಿನ ಪೀಳಿಗೆಗೆ ಅರಿವು ಮೂಡಿಸುವ ಅಗತ್ಯವಿದೆ. -ಎಸ್.ಎಚ್.ಕೋರಡ್ಡಿ, ಜಿಲ್ಲಾ ನ್ಯಾಯಾಧೀಶರು