Advertisement

ನವಭಾರತಕ್ಕೆ ಪೂರಕವಾಗಿ ಇಂದಿನಿಂದ ನವ ಕರ್ನಾಟಕ ನಿರ್ಮಾಣ: ಸಿಎಂ ಬೊಮ್ಮಾಯಿ

10:33 AM Aug 15, 2021 | Team Udayavani |

ಬೆಂಗಳೂರು: ನವಭಾರತಕ್ಕೆ ಪೂರಕವಾಗಿ ಇಂದಿನಿಂದ ನವ ಕರ್ನಾಟಕ ನಿರ್ಮಾಣ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

Advertisement

ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ಮಹೋತ್ಸವದ ಭಾಷಣ ಮಾಡಿದರು.

ಹೊಸ ಚಿಂತನೆ, ಹೊಸ ದಿಕ್ಸೂಚಿಯೊಂದಿಗೆ ನವಕರ್ನಾಟಕ ನಿರ್ಮಾಣ ಆಗಲಿದೆ.  ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಕ್ಕೆ 14 ಅಮೃತ ಯೋಜನೆಗಳನ್ನು ಪ್ರಕಟಿಸಿದರು. ಇದರಲ್ಲಿ ಸ್ಮಾರ್ಟ್ ಸ್ಟಾರ್ಟ್ ಅಪ್, ಅಮೃತ ಶಾಲೆ, ಗ್ರಾ.ಪಂ.ಗಳು, ಗ್ರಾಮೀಣ ವಸತಿ ಯೋಜನೆಗಳೂ ಒಳಗೊಂಡಿವೆ.

ಕೈಗಾರಿಕೆಯಲ್ಲಿ ರಾಜ್ಯವನ್ನು ನಂಬರ್ 1 ಸ್ಥಾನಕ್ಕೇರಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತದೆ. ಈ ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ತಂದು ಯುವಕರಿಗೆ ಉದ್ಯೋಗ ಒದಗಿಸುವ ಕೆಲಸ ಮಾಡುತ್ತೇವೆ. ನಾಡಿನ ನೆಲ-ಜಲದ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ. ಅಪ್ಪರ್ ಕೃಷ್ಣ ಯೋಜನೆಗೆ ಕಾನೂನಿನ ತೊಡಕಿದೆ ಅದನ್ನು ನಿವಾರಿಸುತ್ತೇನೆ. ಮೇಕೆದಾಟು ಯೋಜನೆ ಬಗ್ಗೆ ಕೇಂದ್ರ ಸರ್ಕಾರದ ಜೊತೆ ಚರ್ಚೆ ಮಾಡುತ್ತೇನೆ. ಕಾನೂನಿನ ತೊಡಕನ್ನು ಆದಷ್ಟು ಬೇಗ ನಿವಾರಿಸಿ ಯೋಜನೆ ಜಾರಿಗೊಳಿಸಿ ಕುಡಿಯುವ ನೀರುಒದಗಿಸುವ ಕೆಲಸ ಮಾಡುತ್ತೇನೆ. ಮಹದಾಯಿ ಯೋಜನೆಯನ್ನು ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆಂದು ಹೇಳಿದರು.

ಅಮೃತ ಗ್ರಾಮೀಣ ವಸತಿ ಯೋಜನೆ ಅಡಿಯಲ್ಲಿ ಸರ್ವರಿಗೂ ವಸತಿಯನ್ನು ನೀಡುವ ಯೋಜನೆ ನಮ್ಮ ಸರ್ಕಾರ ಜಾರಿಗೆ ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಯಾರು ಸಹ ವಸತಿ ರಹಿತರಾಗಿರಬಾರದು. 750 ಗ್ರಾಮ ಪಂಚಾಯಿತಿಗಳಲ್ಲಿ ಸರ್ವರಿಗೂ ವಸತಿ ಕಲ್ಪಿಸಲಾಗುವುದು ಎಂದು ತಿಳಿಸಿದರು.

Advertisement

ಇದನ್ನೂ ಓದಿ: ಧ್ವಜಾರೋಹಣಕ್ಕೆ ಬಂದ ಸಚಿವೆ ಶಶಿಕಲಾ ಜೊಲ್ಲೆಗೆ ಕಾಂಗ್ರೆಸ್ ಮಹಿಳಾ ಘಕದಿಂದ ಘೇರಾವ್!

ರೈತ, ನೇಕಾರ, ಮೀನುಗಾರರ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟಕ್ಕೆ ವಿಶೇಷ ಪ್ರೋತ್ಸಾಹ ನೀಡಲು 750 ಅಮೃತ ರೈತ ಉತ್ಪಾದಕ ಸಂಸ್ಥೆಗಳ ಸ್ಥಾಪನೆ ಮಾಡಲಾಗುವುದು ಮತ್ತು ಆಯ್ದ 75 ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಚ ಮತ್ತು ಸೌಂದರ್ಯ ಕಾಪಾಡಿಕೊಳ್ಳಲು ಅಮೃತ ನಿರ್ಮಲ ನಗರ ಯೋಜನೆ ರೂಪಿಸಿ, ಪ್ರತಿ ಸ್ಥಳೀಯ ಸಂಸ್ಥೆಗೆ 1 ಕೋಟಿ ರೂ.ನಂತೆ 75 ಕೋಟಿ ರೂ ಒದಗಿಸಲಾಗುವುದು ಎಂದು ಹೇಳಿದರು.

ಪ್ರಾದೇಶಿಕ ಅಸಮತೋಲನ ತಪ್ಪಿಸಿ, ಸಮತೋಲನ ತರುವ ಕೆಲಸ ಮಾಡ್ತೇವೆ. ಒಂದು ಬಾರಿ ಸಮತೋಲನಕ್ಕೆ ತಂದು ಅಭಿವೃದ್ಧಿ ಪಥದತ್ತ ನಡೆಸಿಕೊಂಡು ಹೋಗುತ್ತೇವೆ. ಇಂದು ಸಂಕಲ್ಪ ಮಾಡಿಕೊಳ್ಳುವ ದಿನ, ಕೇವಲ ಸಂಕಲ್ಪ ಮಾಡುವುದಷ್ಟೇ ಅಲ್ಲ ಅದನ್ನ ಕಾರ್ಯಗತಕ್ಕೆ ತರುತ್ತೇವೆ.

ಈ ಬದಲಾವಣೆಯನ್ನು ರಾಜ್ಯದ ಜನತೆ ಕೆಲವೇ ತಿಂಗಳುಗಳಲ್ಲಿ ನೋಡುತ್ತಾರೆ. ಕೆಲವೇ ದಿನಗಳಲ್ಲಿ ಆ ಬದಲಾವಣೆ ಆರಂಭ ಆಗುತ್ತೆ. ಪ್ರತಿಯೊಬ್ಬ ಪ್ರಜೆಯ ಸಲಹೆಯನ್ನು ಪಡೆದು ನಾಡು ಕಟ್ಟುವ ಕೆಲಸ ಮಾಡುತ್ತೇವೆ. ಸ್ವಾತಂತ್ರ್ಯ ದಿನಾಚರಣೆಯ ಈ ಅಮೃತ ಮಹೋತ್ಸವ ಸಮಾರಂಭದಲ್ಲಿ ನಿಮ್ಮ ಬದುಕು ಬಂಗಾರವಾಗಲಿ ಎಂದರು

Advertisement

Udayavani is now on Telegram. Click here to join our channel and stay updated with the latest news.

Next