Advertisement
ನವಿಲುತಿರ್ಥ ಜಲಾಶಯದಿಂದ 5594 ಕ್ಯೊಸೆಕ್ ನೀರು ಹರಿಬಿಡಲಾಗಿದ್ದು ನದಿ ಪಾತ್ರದ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಹಲವು ಸೇತುವೆಗಳು ಜಲಾವೃತಗೊಂಡಿವೆ.
Related Articles
Advertisement
ಸದ್ಯ ಮಲಪ್ರಭಾ ಪ್ರವಾಹದ ನೀರು ಹೆಚ್ಚುತ್ತಿದ್ದು ನದಿ ಪಾತ್ರದಲ್ಲಿನ ರೈತರು ಪಂಪ್‌ಸೆಟ್ ಜಾನುವಾರು ಸೇರಿದಂತೆ ತಮ್ಮ ಸಲಕರಣೆಗಳನ್ನು ಬೇರೆ ಕಡೆ ಸಾಗಿಸುತ್ತಿದ್ದಾರೆ. ತಾವು ಬೆಳೆದ ಪೇರಳೆ ಹಣ್ಣುಗಳನ್ನು ಬಿಡಿಸಿ ಅಗ್ಗದ ಬೆಲೆಗೆ ಮಾರುತ್ತಿದ್ದಾರೆ. ಹಣ್ಣುಗಳನ್ನು ಮೊದಲು ತೆಗೆದುಕೊಂಡು ಹೋಗುವಂತೆ ರೈತರು ವ್ಯಾಪಾರಸ್ಥರಲ್ಲಿ ಅಂಗಲಾಚುತ್ತಿದ್ದಾರೆ.
ಕಳೆದ ಬಾರಿ ಬೆಳೆದಿದ್ದ ಉತ್ತಮ ಬೆಳೆಗಳು ರೈತರ ಕೈ ಸೇರುವ ಸಂದರ್ಭದಲ್ಲಿ ಪ್ರವಾಹಕ್ಕೆ ತುತ್ತಾಗಿದ್ದವು. ಸದ್ಯ ಮತ್ತೆ ಸಾಲ ಮಾಡಿ ಬಿತ್ತನೆ ಮಾಡಿದ ರೈತರ ಜಮಿನುಗಳಿಗೆ ಪ್ರವಾಹದ ನೀರು ನುಗ್ಗಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ.
ಬಾದಾಮಿ ತಹಸಿಲ್ದಾರ ಜೆ ಬಿ ಮಜ್ಜಗಿ ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿದ್ದು ಮಲಪ್ರಭಾ ನದಿಯ ಪ್ರವಾಹವನ್ನು ವೀಕ್ಷಿಸಿದ ಅವರು, ನೀರಿನ ಮಟ್ಟ ಪರಿಶೀಲಿಸಿದರು. ನಂತರ ಗ್ರಾಮಗಳಲ್ಲಿ ಸಂಚರಿಸಿ ಜನರಲ್ಲಿ ಜಾಗ್ರತಿ ಮೂಡಿಸಿ ನದಿ ಪಾತ್ರದಲ್ಲಿ ಬಟ್ಟೆ ತೊಳೆಯುವುದು, ಸ್ನಾನ ಮಾಡುವುದು, ವಾಹನ ಹಾಗೂ ಜಾನುವಾರುಗಳ ಮೈ ತೊಳೆಯುವುದು ಮಾಡಬಾರದು, ಸೆಲ್ಪಿ ಸೇರಿದಂತೆ ಪ್ರವಾಹದಲ್ಲಿ ಹುಚ್ಚು ಸಾಹಸ ಮಾಡುವ ಗೋಜಿಗೆ ಹೋಗಬಾರದು ಎಂದು ಎಚ್ಚರಿಸಿದರು. ಪ್ರವಾಹ ಪ್ರದೇಶದಲ್ಲಿ ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.